ಈ ಬಾರಿ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ- 2020. ಸರಳವಾಗಿ ನಡೆಯಲಿದೆ. ಗ್ರಾಮೀಣ ಪ್ರದೇಶದ ಜನ ದಸರಾಗೆ ಈ ಬಾರಿ ಬರವುದೇ ಬರಬೇಡಿ ಎಂದು ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಡಿ. ಭಾರತಿ ಮನವಿ ಮಾಡಿ ದ್ದಾರೆ.
ಈ ಬಾರಿ ದಸರಾದಲ್ಲಿ ಜಂಬೂಸವಾರಿ ಮೆರವಣಿಗೆ ಇರಲ್ಲ. ಅರಮನೆಯಲ್ಲಿ ಮಾತ್ರ ಜಂಬೂಸವಾರಿ ಇರುತ್ತೆ. ಅರಮನೆ ಒಳಗೆ 300 ಜನರಿಗೆ ಮಾತ್ರ ಅವಕಾಶ ಇದೆ. ಸಾರ್ವಜನಿಕರಿಗೆ ನೇರವಾಗಿ ಜಂಬೂಸವಾರಿ ನೋಡುವ ಅವಕಾಶ ಇಲ್ಲ. ಹಾಗಾಗಿ ಗ್ರಾಮೀಣ ಪ್ರದೇಶದ ಜನರು ನಗರಕ್ಕೆ ಬರಬೇಡಿ. ಎಲ್ಲರೂ ಮನೆಯಲ್ಲೇ ಇದ್ದು ಟಿವಿಗಳಲ್ಲಿ ದಸರಾ ನೋಡಿ.
ಸಾಮಾಜಿಕ ಜಾಲತಾಣಗಳಲ್ಲಿ ಲೈವ್ ಟೆಲಿಕಾಸ್ಟ್ ವ್ಯವಸ್ಥೆ ಮಾಡಲಾಗುತ್ತದೆ. ಗ್ರಾಮೀಣ ಭಾಗದ ಜನರು ನಗರಕ್ಕೆ ಬಂದು ಕೊರೊನಾ ಹಬ್ಬಲು/ಹಬ್ಬಿಸಿಕೊಳ್ಳಲು ಅವಕಾಶ ಮಾಡಿಕೊಡಬೇಡಿ. ಸೋಂಕಿನ ಲಕ್ಷಣ ಇರುವವರು ಟೆಸ್ಟ್ ಮಾಡಿಸಿಕೊಳ್ಳಿ. 60 ವರ್ಷ ಮೇಲ್ಪಟ್ಟ ವೃದ್ದರು ಹಾಗೂ ಮಕ್ಕಳು ಅನಾವಶ್ಯಕ ಓಡಾಡುವುದನ್ನು ನಿಲ್ಲಿಸಿ ಎಂದು ಗ್ರಾಮೀಣ ಭಾಗದ ಜನತೆಗೆ ಬಿ.ಭಾರತಿ ಮನವಿ ಮಾಡಿಕೊಂಡಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ