ನಾಳೆಯಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆಗೆ ಬರಬೇಡಿ – ಆರೋಗ್ಯ ಸಚಿವ ಸುಧಾಕರ್

Team Newsnap
1 Min Read
Siddu will not win in Kolar : Minister Sudhakarಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ - ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

ನಾಳೆಯಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆ ಗೆ ಬರಬೇಡಿ. ಮುಂದಿನ ದಿನಾಂಕವನ್ನು ಅಧಿಕೃತವಾಗಿ ತಿಳಿಸುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ತೀರ್ಮಾನಿಸಲಾಗಿತ್ತು.
3 ರಿಂದ 3.5 ಕೋಟಿ ಜನ ಕರ್ನಾಟಕದಲ್ಲಿ ಇದ್ದಾರೆ ಎಂದು ಅಂದಾಜಿಸಲಾಗಿದೆ. 1 ಕೋಟಿ ಕೋವಿ ಶೀಲ್ಡ್ ಗೆ 400 ಕೋಟಿ ಕೊಟ್ಟು ಆರ್ಡರ್ ಮಾಡಿದ್ದೇವೆ. 28ನೇ ತಾರಿಕಿನಿಂದ ನೊಂದಣಿ ಆರಂಭವಾಗಿದೆ, ನೋಂದಣಿ ಮಾಡಿಕೊಳ್ಳಿ ಎಂದು ಹೇಳಿದರು.

ಎಲ್ಲರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೊಡುತ್ತೇವೆ. 45 ವರ್ಷ ಮೇಲ್ಪಟ್ಟವರಿಗೆ ಈಗ ಉಚಿತವಾಗಿ ನೀಡುತ್ತಿರುವ ಲಸಿಕೆ ನೀಡಿಕೆ ಯಥಾವತ್ತಾಗಿ ಮುಂದುವರಿಯಲಿದೆ ಎಂದರು.

45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಯ 99 ಲಕ್ಷ ಡೋಸ್ ನಲ್ಲಿ 95 ಲಕ್ಷ ಡೋಸನ್ನು 45 ವರ್ಷ ಮೇಲ್ಪಟ್ಟವರಿಗೆ ಈಗಾಗಲೇ ನೀಡಲಾಗಿದೆ. ಸರ್ಕಾರದ ನಡವಳಿಕೆಯನ್ನು ಸರ್ಕಾರದ ಕ್ರಮವನ್ನು ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ತಿಳಿಸಿದರು.

Share This Article
Leave a comment