ನವೆಂಬರ್ 30 ರವರೆಗೆ ಶಾಲೆಗಳನ್ನು ತೆರೆಯಬೇಡಿ – ಕೇಂದ್ರ

Team Newsnap
1 Min Read
Just for fun, I threatened with a bomb call - statement of a minor boy ಜಸ್ಟ್ ಫಾರ್ ಫನ್‍ ಗೆ ಬಾಂಬ್ ಬೆದರಿಕೆ ಹಾಕಿದ್ದೆ – ಅಪ್ರಾಪ್ತ ಬಾಲಕ ಹೇಳಿಕೆ

ದೇಶದಾದ್ಯಂತ ಪ್ರತಿನಿತ್ಯ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತು ಸಾವಿನ ಸಂಖ್ಯೆಯು ಇನ್ನೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದಾಗಿ ನವೆಂಬರ್ 30 ರವರೆಗೆ ಶಾಲೆಗಳನ್ನು ತೆರೆಯದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ನವೆಂಬರ್ ತಿಂಗಳಲ್ಲಿ ಹಲವು ರಾಜ್ಯಗಳು ಶಾಲೆಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಆದರೆ ಕೊರೋನಾ ಸೋಂಕು ಹಲವು ರಾಜ್ಯಗಳಲ್ಲಿ ಹೆಚ್ಚುತ್ತಿಧೆ. ಮುಂದಿನ ಎರಡು ತಿಂಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

ಈ ನಡುವೆ ಕೇಂದ್ರ ಗೃಹ ಕಾರ್ಯದರ್ಶಿ ಅವರು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. ಈ ಹಿಂದೆ ಆಗಸ್ಟ್ 30 ರಂದು ಹೊರಡಿಸಲಾಗಿರುವ ಮಾರ್ಗಸೂಚಿ ನವೆಂಬರ್ 30 ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

Share This Article
Leave a comment