ಸಚಿವ ಸ್ಥಾನ ವಂಚಿತರು ಹಗುರವಾಗಿ ಮಾತನಾಡೋದು ಬೇಡ .ಅಸಮಾಧಾನ ಇದ್ದರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡೋದಕ್ಕೆ ನನ್ನ ಅಭ್ಯಂತರವಿಲ್ಲ. ಎಂದು ಅತೃಪ್ತರಿಗೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಅತೃಪ್ತ ಶಾಸಕರು ವಿರೋಧ ಇದ್ರೆ ದೆಹಲಿಗೆ ಹೋಗಲಿ. ವರಿಷ್ಠರಿಗೆ ದೆಹಲಿಗೆ ಹೋಗಿ ದೂರು ಕೊಡಲಿ. ಇಲ್ಲಿ ಮಾತಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಶಾಸಕರು ಮಾಡೋದು ಬೇಡ. ವರಿಷ್ಠರು ಸರಿ ತಪ್ಪು ಯಾವುದು ಅಂತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು
ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಳ್ಳುವದರ ಜೊತೆ ಸಿಡಿ ವಿಚಾರ ಹೆಚ್ಚು ಸದ್ದು ಮಾಡುತ್ತಿದೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸತೀಶ್ ರೆಡ್ಡಿ, ತಿಪ್ಪಾರೆಡ್ಡಿ, ಅರವಿಂದ್ ಬೆಲ್ಲದ್, ರೇಣುಕಾಚಾರ್ಯ, ಸಿದ್ದು ಸವದಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.
ಈ ನಡುವೆ ಎಂಎಲ್‍ಸಿ ಹೆಚ್. ವಿಶ್ವನಾಥ್, ಸಿಎಂ ಕೊಟ್ಟ ಮಾತು ತಪ್ಪುವ ಮೂಲಕ ವಚನಭ್ರಷ್ಟರಾಗಿದ್ದಾರೆ. 17 ಜನರ ಭಿಕ್ಷೆಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿರೋದನ್ನ ಮರೆತ ಹಾಗೆ ಕಾಣಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ