January 16, 2025

Newsnap Kannada

The World at your finger tips!

praveen nettar

ಪೃಥ್ವಿರಾಜ್ ಬದಲು ಪ್ರವೀಣ್ ನನ್ನು ಹತ್ಯೆ ಮಾಡಿದ್ರಾ ಎಂಬ ಅನುಮಾನ ಪೋಲಿಸರದ್ದು ?

Spread the love

ಬೇರೆ ವ್ಯಕ್ತಿಯನ್ನು ಟಾರ್ಗೆಟ್ ಮಾಡಿದ್ದ ಹಂತಕರು ತಪ್ಪು ಮಾಹಿತಿಯಿಂದಾಗಿ
ಬೆಳ್ಳಾರೆ ಪ್ರವೀಣ್ ಹತ್ಯೆ ಮಾಡಿದರೆ ಎಂಬ ಅನುಮಾನ ಈಗ ತನಿಖಾ ತಂಡವನ್ನು ಕಾಡುತ್ತಿದೆ.

ಪ್ರವೀಣ್ ಹತ್ಯೆಯ ಸಂಬಂಧ ಹಂತಕರಿಗೆ ಸಹಾಯ ಮಾಡಿದ ಕಾರಣಕ್ಕಾಗಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಈ ಮಾಹಿತಿ ಹೊರ ಬಿದ್ದಿದೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಸಿಸಿಟಿವಿ ದೃಶ್ಯವೊಂದರಲ್ಲಿ ಭಯಾನಕ ಸತ್ಯ ಹೊರಬಿದ್ದಿದೆ. ಆರೋಪಿಗಳಲ್ಲಿ ಒಬ್ಬನಾದ ಶಫೀಕ್ ವ್ಯಕ್ತಿಯೊಬ್ಬನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಬೆಳ್ಳಾರೆಯ ಕೋಳಿ ವ್ಯಾಪಾರಿ ಪೃಥ್ವಿರಾಜ್‍ನನ್ನು ದೂರದಿಂದಲೇ ತೋರಿಸಿ ಹೋಗಿದ್ದಾನೆ.

ಆದರೆ, ಪೃಥ್ವಿರಾಜ್ ಬದಲಿಗೆ ಪ್ರವೀಣ್ ಹತ್ಯೆ ಆಗಿದ್ದು, ಪ್ರವೀಣ್ ಹತ್ಯೆ ಹಿಂದೆ ಯಾರ ಕೈವಾಡವಿದೆ? ಪೃಥ್ವಿರಾಜ್‍ನನ್ನು ಕೊಲೆ ಮಾಡಲು ಬಂದು ಪ್ರವೀಣ್‍ನ ಕಥೆ ಮುಗಿಸಿದ್ರಾ? ತಪ್ಪು ಮಾಹಿತಿಯಿಂದ ಈ ಕೊಲೆ ನಡೀತಾ? ಹೀಗೆ ಸಾಲು, ಸಾಲು ಪ್ರಶ್ನೆಗಳು ಎದುರಾಗಿದೆ. ಈ ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಂಧಿತ ಆರೋಪಿಗಳು ಹತ್ಯೆಗೆ ನಡೆದಿದ್ದ ಪ್ಲಾನ್ ಬಗ್ಗೆ ಮಾಹಿತಿ ನೀಡಿದ್ದಾರೆ. ಶಫೀಕ್ ಮತ್ತು ಝಾಕೀರ್ ಬಿಟ್ಟು ಹತ್ಯೆಗೆ ನಿಜವಾದ ಕಾರಣರಾದ ಹಂತಕರನ್ನು ಇನ್ನೂ ಬಂಧಿಸಿಲ್ಲ. ಹಂತಕರ ಹುಡುಕಾಟಕ್ಕಾಗಿ ಐಪಿಎಸ್ ಅಧಿಕಾರಿ ನೇತೃತ್ವದ ತಂಡ ಕೇರಳದಲ್ಲಿ ಬೀಡುಬಿಟ್ಟಿದೆ. ಮಾಹಿತಿಯ ಪ್ರಕಾರ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಶಫೀಕ್ ಮಾಹಿತಿ ಆಧರಿಸಿ ಕೇರಳದ ಗ್ರಾಮವೊಂದರಲ್ಲಿ ಇಬ್ಬರು ಶಂಕಿತರ ವಶಕ್ಕೆ ಪಡೆಯಲಾಗಿದೆ. ಇವರೇ ಆ ಹಂತಕರು ಎನ್ನುವುದು ಸ್ಪಷ್ಟವಾಗಬೇಕಿದೆ. ಸದ್ಯ ಬಂಧಿತ ಶಫೀಕ್ ಮತ್ತು ಝಾಕೀರ್ ಹತ್ಯೆಗೆ ಸಹಾಯ ಮಾಡಿದ್ದಾರೆ ಹಂತಕರು ತಪ್ಪಿಸಿಕೊಳ್ಳಲು ದಾರಿ ತೋರಿಸಿದವರಾಗಿದ್ದಾರೆ. ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

Copyright © All rights reserved Newsnap | Newsever by AF themes.
error: Content is protected !!