ಸುದ್ದಿಗಾರರ ಜೊತೆ ಮಾತನಾಡಿದ ಸಂಸದೆ ಸುಮಲತಾ, ಇದೊಂದು ರಾಜಕೀಯ ಹೋರಾಟ ಅಲ್ಲ, ನಾವೆಲ್ಲರೂ ರೈತರ ಪರ ನಿಲ್ಲಬೇಕು, ರೈತಪರ ನಿಲುವಿಗೆ ಬದ್ಧರಾಗಬೇಕು ಹಾಗಾಗಿ ಎಲ್ಲರನ್ನೂ ಒಳಗೊಂಡು ಹೋರಾಟ ರೂಪಿಸಲಾಗಿದೆ ಎಂದರು.
ಸಂಕಷ್ಟ ಕಾಲದಲ್ಲಿ ರೈತರ ಪರ ಸರ್ಕಾರ ನಿಲ್ಲುತ್ತಿಲ್ಲ, ರೈತರಿಗೆ ಅನ್ಯಾಯವಾಗುತ್ತಿದೆ, ಕಾವೇರಿ ಕಣಿವೆ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಿಸಬೇಕಾಗಿದೆ. ಇದನ್ನು ಪ್ರತಿಯೊಬ್ಬರು ಅರಿತು ಮುನ್ನಡೆ ಬೇಕಾಗಿದೆ ಎಂದರು.
ಕೇಂದ್ರ ಸರ್ಕಾರದ ಕಡೆ ರಾಜ್ಯ ಸರ್ಕಾರ ಕೈ ತೋರಿಸಬಹುದು. ಆದರೆ ಈ ಹಿಂದೆ ಅಂಬರೀಶ್ ಕೇಂದ್ರ ಸಚಿವರಾಗಿದ್ದಾಗ ಕಾವೇರಿ ನೀರಿನ ವಿಷಯದಲ್ಲೇ ರಾಜ್ಯಕ್ಕೆ ಅನ್ಯಾಯವಾದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿದರ್ಶನವಿದೆ ಕೇಂದ್ರ ಸರ್ಕಾರ ಇತ್ಯರ್ಥ ಮಾಡುವುದಾಗಿದ್ದರೆ ಅವರೇಕೆ ರಾಜೀನಾಮೆ ನೀಡುತ್ತಿದ್ದರು ಎಂಬುದನ್ನು ತಿಳಿಯಬೇಕು, ಇಂತಹ ವಿಷಯದಲ್ಲಿ ಸುಮ್ಮನೆ ರಾಜಕಾರಣ ಮಾಡಬಾರದುಎಂದು ಹೇಳಿದರು.
ಕಾವೇರಿ ನದಿ ನೀರು ವಿಚಾರದಲ್ಲಿ ತಮಿಳುನಾಡು ಸದಾ ಜಾಗೃತ ವಹಿಸಲಿದೆ. ಹಲವು ನಿರ್ಧಾರಗಳು ಅವರ ಪರವಾಗಿ ಹೊರಬಂದಿದೆ. ರಾಜ್ಯ ಸರ್ಕಾರ ಸಹ ಮುನ್ನೆಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ರೈತರ ವಿರುದ್ಧ ನಿಲುವು ತಾಳಬಾರದು ಎಂದು ಹೇಳಿದರು.
ನಾನು ಪಕ್ಷೇತರ ಸಂಸದೆ, ರೈತರ ಪರ ಹೋರಾಟಕ್ಕೆ ಸದಾ ನಿಲ್ಲಲಿದ್ದೇನೆ, ಈ ವಿಚಾರವಾಗಿ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ, ಕಾವೇರಿ ನದಿ ನೀರಿನ ವಿಚಾರದಲ್ಲಿ ಯಾರು ಸಹ ರಾಜಕಾರಣ ಮಾಡಬಾರದು ಎಂದು ಹೇಳಿದರು.
More Stories
ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
ಪ್ರತಿಸ್ಪಂದಿಸಿ ಆದರೆ ಪ್ರತಿಕ್ರಿಯಿಸಬೇಡಿ
ಮರಿಚೀಕೆಯಾಗದಿರು ಒಲವೇ