ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು

Team Newsnap
2 Min Read

ಮೈಸೂರು : ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಜನಸ್ನೇಹಿ ಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.

ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 37 ನೇ ತಂಡದ ಪತ್ರಾಂಕಿತ ಪ್ರಶಿಕ್ಷಣಾರ್ಥಿಗಳ ನಿರ್ಗಮಿತ ಪಥ ಸಂಚಲನ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಸಿಎಂ ಸಿದ್ದು ಪಥ ಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಕರ್ನಾಟಕ ಪೊಲೀಸ್ ಅಕಾಡೆಮಿ ಪ್ರತಿಷ್ಠಿತ ತರಬೇತಿ ನೀಡುವ ಅಕಾಡೆಮಿಯಾಗಿದೆ. ತರಬೇತಿ ಸಂದರ್ಭದಲ್ಲಿ ದೈಹಿಕವಾಗಿ ಸದೃಡವಾಗುವ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ತಿಳಿಸಲಾಗುತ್ತದೆ. ತರಬೇತಿಯ ನಂತರ ನೀವು ಸಮಾಜ ಸೇವೆಗೆ ತೆರಳುತ್ತಿರಿ. ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರು ಸಮಾಜ ಸೇವಕರು. ನಾವು ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

image 15

ಜನರು ನಮ್ಮ ನಿಮ್ಮ ಮೇಲೆ ವಿಶ್ವಾಸ ಇಟ್ಟುಕೊಂಡಿರುತ್ತಾರೆ. ಕಾನೂನಿನ ಅಡಿಯಲ್ಲಿ ಜನರ ವಿಶ್ವಾಸ ಗಳಿಸಬೇಕು. ಪೊಲೀಸ್ ಇಲಾಖೆಯಲ್ಲಿ ಕ್ಲಿಷ್ಟ ಪರಿಸ್ಥಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಆದರೂ ತಾಳ್ಮೆ ಕಳೆದು ಕೊಳ್ಳದೆ ಶಾಂತ ರೀತಿಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಲಾಬಿಗೆ ಒಳಗಾಗದೆ ನ್ಯಾಯ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಪ್ರತಿಯೊಬ್ಬ ವ್ಯಕ್ತಿಗೂ ನ್ಯಾಯ ರೀತಿಯಲ್ಲಿ ಬದುಕುವ ಹಕ್ಕು ಇರುತ್ತದೆ. ಇದಕ್ಕೆ ಧಕ್ಕೆ ಆಗಬಾರದು. ನಮ್ಮ ಸಮಾಜದಲ್ಲಿ ಹಲವು ಜಾತಿ, ಧರ್ಮದ ಜನರು ವಾಸಿಸುತ್ತಿದ್ದಾರೆ. ಯಾವ ವರ್ಗದವರೂ ಸಹ ದುರ್ಬಲ ವರ್ಗದವರ ಮೇಲೆ ದೌರ್ಜನ್ಯ ಆಗದಂತೆ ನೋಡಿಕೊಳ್ಳಬೇಕು ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.

image 16

ತಪ್ಪು ಮಾಡಿದವರಿಗೆ ಶಿಕ್ಷೆ ಆಗದೆ ಹೋದರೆ ಅವರು ಪುನಃ ತಪ್ಪು ಮಾಡುವ ಸಾದ್ಯತೆ ಹೆಚ್ಚು. ಯಾರು ನಿರಂತರವಾಗಿ ಅಪರಾಧಗಳನ್ನು ಮಾಡುತ್ತಾರೆ ಅವರ ಜೊತೆ ಕಠಿಣವಾಗಿ ಪೊಲೀಸ್ ನವರು ವರ್ತಿಸಬೇಕು. ಇತ್ತೀಚೆಗೆ ಸೋಷಿಯಲ್ ಮೀಡಿಯಾ ದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಸಮಾಜದ ವಾತಾವರಣ ಹಾಳು ಮಾಡುತ್ತಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಯಾವ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಇರುವುದಿಲ್ಲ ಆ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉತ್ತಮ ಪ್ರಶಿಕ್ಷಣಾರ್ಥಿಗಳಾದ ಯಶವಂತ್ ಕುಮಾರ್, ಹೇಮಂತ್ ಶರಣ್ ಜೆ. ರವಿಕುಮಾರ್ ಕೆ. ವೈ, ಶ್ರೀಮತಿ ಸ್ನೆಹರಾಜ್ ಎನ್ ಅವರಿಗೆ ಬಹುಮಾನ ವಿತರಣೆ ಮಾಡಲಾಯಿತು.ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್

ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಪರಮೇಶ್ವರ್, ತರಬೇತಿ ವಿಭಾಗದ ಡಿ ಜಿ ಪಿ ರವೀಂದ್ರನಾಥ್,
ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾದ ಲೋಕೇಶ್ ಬಿ ಜಗಳಸರ್ ಅವರು ಉಪಸ್ಥಿತರಿದ್ದರು.

Share This Article
Leave a comment