ವೈದ್ಯರ ನಿರ್ಲಕ್ಷ್ಯದಿಂದಾಗಿ ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಜರುಗಿದೆ. ಸನಾ ಮಾಂಜ್ರೇಕರ್ (24) ಮೃತ ದುರ್ದೈವಿ. ಮೃತ ಮಹಿಳೆಗೆ ನಿನ್ನೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.
ಕಳೆದ 19 ದಿನಗಳ ಹಿಂದೆಯಷ್ಟೇ ಕಡವಾಡ ನಿವಾಸಿ ಸ್ವಪ್ನಿಲ್ ಮಾಂಜ್ರೇಕರ್ ಜೊತೆ ಸನಾ ಮಾಂಜ್ರೇಕರ್ ಅವರ ಮದುವೆಯಾಗಿತ್ತು. ಕಳೆದ 8 ದಿನದ ಹಿಂದೆ ಜ್ವರದಿಂದ ಗುಣಮುಖಳಾಗಿದ್ದ ಸನಾಗೆ, ನಿನ್ನೆ ಮತ್ತೆ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ ನಗರದ ಕಾಜುಭಾಗ್‌ನ ಸಾವಂತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.
ಆದರೆ ವೈದ್ಯರು ಏಕಾಏಕಿ 4 ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಅಸ್ವಸ್ಥಗೊಂಡಿದ್ದರು .ಮತ್ತೆ ಬೆಳಗಿನ ಜಾವ 4 ಗಂಟೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಸ್ಪಂದಿಸದೇ ನವವಿವಾಹಿತೆ ಕೊನೆಯುಸಿರೆಳೆದಿದ್ದಾಳೆ ಎನ್ನಲಾಗಿದೆ. ಇತ್ತ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ
ಕಾರವಾರ ನಗರ ಠಾಣೆ ಎದುರು ಕುಟುಂಬಸ್ಥರು ಸೇರಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಪ್ರಕರಣ ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ