ಮೈಸೂರು : ಸೋಲಿಗೆ ಹತಾಶರಾಗಬೇಡಿ. ದೃಢ ಸಂಕಲ್ಪ ಮಾಡಿ ಮುನ್ನುಗಿದರೆ ಗೆಲುವು ಸುಲಭ ಎಂದು ಮೈಸೂರು ವಿಭಾಗದ ಪ್ರವಾಸೋಧ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ. ಸವಿತ ಕರೆನೀಡಿದರು .
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಗಂಗಾ ಸಭಾಂಗಣದಲ್ಲಿ ನಡೆಯುತ್ತಿರುವ 50 ದಿನಗಳ ಕೆಎಎಸ್ ಮತ್ತು ಇತರ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಸಾಧನೆ ಮಾಡಲೇ ಬೇಕು ಎಂಬ ತುಡಿತ ಇದ್ದರೆ ಯಾರು ಏನು ಬೇಕಾದರೂ ಸಾಧಿಸಬಹುದು. ಆದರೆ ಅದಕ್ಕೆ ಪರಿಶ್ರಮ ಬೇಕು. ಆಸೆಗೆ ತಕ್ಕ ಕನಸು ಕಾಣಿರಿ, ಅದಕ್ಕೆ ಪೂರಕವಾಗುವಂತೆ ಉತ್ತಮ ತಯಾರಿ ಮಾಡಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.
ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಮುನ್ನ ಎರಡು ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಮೊದಲನೆಯದು ಏನನ್ನು ಓದಬೇಕು ಎಂಬುದನ್ನು ಒಂದು ಟಿಪ್ಪಣಿ ಮಾಡಿಟ್ಟುಕೊಳ್ಳಬೇಕು. ಅದಕ್ಕೆ ಮಾದರಿ ಪ್ರಶ್ನೆಪತ್ರಿಕೆಗಳ ಸಹಾಯ ತೆಗೆದುಕೊಳ್ಳಬಹುದು. ಎರಡನೆಯದು ಪುನರ್‌ಅಧ್ಯಯನ. ಯಾವುದೇ ವಿಷಯ ಅಥವಾ ಸಂಗತಿಯನ್ನು ಒಂದೇ ಬಾರಿ ಓದಿ ಮುಗಿಸುವುದಕ್ಕಿಂತ ಅದನ್ನು ಸಮಯ ಸಿಕ್ಕಾಗೆಲ್ಲ ಪುನರ್ ಅಧ್ಯಯನ ಮಾಡಬೇಕು. ಮುಕ್ತವಾಗಿ ಚರ್ಚೆ ಮಾಡುವ, ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಆಸಕ್ತಿ ಇರುವ ಗುಂಪಿನೊಂದಿಗೆ ಚರ್ಚೆಸುತ್ತಿದ್ದರೆ ಅವುಗಳೆಲ್ಲ ಪರೀಕ್ಷೆಗೆ ನೆರವಾಗುತ್ತವೆ ಎಂದು ತಾವು ಕೆಎಎಸ್ ಪರೀಕ್ಷೆಗೆ ತಯಾರಾದ ಬಗ್ಗೆ ವಿವರಣೆ ನೀಡಿ ಪರೀಕ್ಷಾರ್ಥಿಗಳನ್ನು ಹುರಿದುಂಬಿಸಿ , ಹತಾಶೆ ಬಿಡಿ ದೃಢಸಂಕಲ್ಪ ಮಾಡಿ ಎಂದು ಕರೆ ನೀಡಿದರು.
ಕರಾಮುವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮಾತನಾಡಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತಿ ಹೆಚ್ಚಿನ ಒತ್ತು ನೀಡುತ್ತಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಾನವೀಯ ಮೌಲ್ಯಗಳು ನಶಿಸಿ ಹೋಗುತ್ತಿವೆ. ಪ್ರೀತಿ ವಿಶ್ವಾಸ ಸಂಬಂಧಗಳಿಗಿಂತ ಹಣ, ಅಧಿಕಾರವೇ ಹೆಚ್ಚಾಗಿದೆ. ಯುವಕರು ಈ ಕುರಿತು ಚಿಂತಿಸಬೇಕು. ಎಷ್ಟೇ ಎತ್ತರದ ಹುದ್ದೆಗೆ ಹೋದರು ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ಶಿವ ಶರಣರ ಅರಿವೇ ಗುರು ಎಂಬ ಅಂಶವನ್ನು ಮನನ ಮಾಡಿಕೊಳ್ಳಬೇಕು ಎಂದರು.ಪೆಟ್ರೋಲ್ ಡಿಸೇಲ್ ಮೇಲಿನ ಸೆಸ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ
ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ, ಶೈಕ್ಷಣಿಕ ಡೀನ್ ಪ್ರೊ. ಎನ್. ಲಕ್ಷ್ಮಿ, ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿಬ್ಬಂದಿಗಳಾದ ಸಿದ್ದೇಶ್ ಹೊನ್ನೂರ್, ಗಣೇಶ್ ಕೆ.ಜಿ.ಕೊಪ್ಪಲ್ ಇದ್ದರು.
More Stories
ಪೆಟ್ರೋಲ್ GST ವ್ಯಾಪ್ತಿಗೆ ಸೇರಿಸುವ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಸ್ಪಷ್ಟನೆ
ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ