ಸಧ್ಯಕ್ಕೆ ಲಾಕ್ ಡೌನ್ ಬೇಡ: ಅಗತ್ಯಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿ‌ – ಸಿಎಂ ಬೊಮ್ಮಾಯಿ

Team Newsnap
2 Min Read

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಭೀಕರತೆಯನ್ನು ಕಡಿಮೆ ಮಾಡಲು ಸದ್ಯಕ್ಕೆ ಲಾಕ್​ಡೌನ್​ನಂಥ ಕಠಿಣ ಕ್ರಮ ಬೇಡ, ಅಗತ್ಯಬಿದ್ದರೆ ವೀಕೆಂಡ್ ಕರ್ಫ್ಯೂ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ಎದುರು ಅಭಿಪ್ರಾಯಪಟ್ಟಿದ್ದಾರೆ‌

ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಹಾಗೂ ತಜ್ಞರ ಸಭೆಯಲ್ಲಿ ಕೋವಿಡ್ 3ನೇ ಅಲೆ ತಡೆಯಲು ಯಾವೆಲ್ಲಾ ಕ್ರಮ ಕೈಗೊಳ್ಳಲು ಸೂಚಿಸಿದರು.

ತಜ್ಞರ‌ ಸಲಹೆಗಳು:

  • ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ
  • ಶಾಲಾ-ಕಾಲೇಜು ಆರಂಭಕ್ಕೆ ಸಭೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಲೇ ಶಾಲಾ-ಕಾಲೇಜು ಆರಂಭಿಸಲು ಕೆಲವರು ಅಭಿಪ್ರಾಯ ತಿಳಿಸಿದರೆ, ಸೆಪ್ಟೆಂಬರ್‌ವರೆಗೆ ಕಾದು ನೋಡುವಂತೆ ಇನ್ನು ಕೆಲವರು ಸಲಹೆ ನೀಡಿದ್ದಾರೆ.
  • ಟ್ರೇಸ್ ಮತ್ತು ಟ್ರ್ಯಾಕ್ ಹಾಗೂ ಟ್ರೀಟ್ ಸೂತ್ರವನ್ನು ಹೆಚ್ಚಾಗಿ ಅನುಸರಿಸುವಂತೆ ಪರಿಣತರು ಮುಖ್ಯಮಂತ್ರಿಗಳಾಗಿದ್ದ ಸಲಹೆ ನೀಡಿದ್ದಾರೆ.
  • ಕೇರಳ ಮತ್ತು ಮಹಾರಾಷ್ಟ್ರಕ್ಕೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿಲ್ಲ.
  • ಗ್ರಾಮೀಣ ಪ್ರದೇಶಗಳಲ್ಲಿ ಸಹ ಹೆಚ್ಚು ವ್ಯಾಕ್ಸಿನೇಷನ್‌ ಆಗಬೇಕು. ಅಗತ್ಯ ಬಿಗಿ ಕ್ರಮಗಳು ಅನಿವಾರ್ಯ.
  • ಧಾರ್ಮಿಕ ಹಬ್ಬ ಹರಿದಿನಗಳನ್ನು ಸಾರ್ವಜನಿಕ ಸ್ಥಳದಲ್ಲಿ ಅದ್ದೂರಿ ಸಮಾರಂಭಕ್ಕೆ ಬ್ರೇಕ್ ಹಾಕಬೇಕು.

ಮುಖ್ಯಮಂತ್ರಿ ಬೊಮ್ಮಾಯಿ ಸಭೆಯಲ್ಲಿ ನೀಡಿರುವ ಸಲಹೆಗಳು:

  • ಜಿಲ್ಲಾವಾರು ಕೋವಿಡ್ ಅಂಕಿಅಂಶಗಳ ಮಾಹಿತಿ ಪಡೆದರು. ಇತರ ರಾಜ್ಯಗಳಿಂದ ಆಗಮಿಸುವವರಿಗೆ ಕಡ್ಡಾಯ ಕೋವಿಡ್ ಟೆಸ್ಟ್ ಮಾಡಬೇಕು.
  • ಹೆಚ್ಚಿನ ಪಾಸಿಟಿವಿಟಿ ದರವಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು.
  • ದಿನಗೂಲಿ ನೌಕರರು, ಕೂಲಿ ಕಾರ್ಮಿಕರು, ಆಟೋ, ಓಲಾ, ಊಬರ್, ಹೊಟೆಲ್​ಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ದಿನಗೂಲಿ ಕೆಲಸ ಅವಲಂಬಿತರಿಗೆ ಯಾವುದೇ ತೊಂದರೆಯಾಗಬಾರದು
  • ಸದ್ಯಕ್ಕೆ ಲಾಕ್​ಡೌನ್​ನಂಥ ಕಠಿಣ ಕ್ರಮ ಬೇಡ, ಅಗತ್ಯಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿ.

ಈ ಉನ್ನತ ಮಟ್ಟದ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಸದಸ್ಯರು, ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು, ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಸಚಿವರಾದ ಡಾ. ಸಿಎನ್ ಅಶ್ವತ್ಥ ನಾರಾಯಣ, ಡಾ.ದೇವಿ ಪ್ರಸಾದ್ ಶೆಟ್ಟಿ, ಡಾ. ಎಂಕೆ ಸುದರ್ಶನ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಇತರರು ಪಾಲ್ಗೊಂಡಿದ್ದರು.

Share This Article
Leave a comment