December 24, 2024

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಆತಂಕ ಬೇಡ: ಬೊಮ್ಮಾಯಿ

Spread the love

ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧೈರ್ಯದ ಮಾತುಗಳನ್ನಾಡಿದ್ದಾರೆ.


ಎಂಜಿನಿಯರ್‌ಗಳ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕೆ.ಆರ್.ವೃತ್ತದ ಬಳಿ ಇರುವ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕರ್ನಾಟಕ ಎಂಜಿನಿಯರಿಂಗ್ ಸೇವಾ ಸಂಘದ ವತಿಯಿಂದ ನಿರ್ಮಿಸಿರುವ ಎಂಜಿನಿಯರ್‌ಗಳ ತರಬೇತಿ ಕೇಂದ್ರದ “ಎಂಜಿನಿಯರ್ ಭವನ’ ಉದ್ಘಾಟಿಸಿದ ಮುಖ್ಯಮಂತ್ರಿಗಳು ನಂತರ ವರದಿಗಾರರೊಂದಿಗೆ ಮಾತನಾಡಿದರು.


ಈಗಿನ ಕಾಲಕ್ಕೆ ತಕ್ಕಂತೆ ಯುವಜನಾಂಗಕ್ಕೆ ಉತ್ತಮ ಶಿಕ್ಷಣ ನೀಡಿ ಒಳ್ಳೆಯ ಭವಿಷ್ಯ ರೂಪಿಸಲು ಹೊಸ ಶಿಕ್ಷಣ ನೀತಿ ಪೂರಕವಾಗಿದೆ. ಇದರಿಂದ ಕ್ರಾಂತಿಕಾರಕ ಬದಲಾವಣೆ ಸಾಧ್ಯ. ಈ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಹೊಸ ನೀತಿ ಬರುವ ಮುನ್ನ ಎಲ್ಲೆಡೆ ಚರ್ಚೆ ಆಗಿದೆ. ವಿವಿಮಟ್ಟದಲ್ಲೂ ಚರ್ಚೆಯಾಗಿದೆ. ಇನ್ನೂ ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದೆ. ಪ್ರಾಥಮಿಕ ಮತ್ತುಪ್ರೌಢಶಿಕ್ಷಣದ ಬಗ್ಗೆ ಮತ್ತೊಂದು ಸಮಿತಿ ರಚಿಸಿ ಚರ್ಚೆ ನಡೆಲಾಗುವುದು ಎಂದರು.


ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಕೆ.ಆರ್. ವೃತ್ತದಲ್ಲಿ ವಿಶ್ವೇಶ್ವರಯ್ಯ ಪ್ಲಾಜಾ ಮಾಡಲಾಗಿದೆ. ಬಿಬಿಎಂಪಿ ನಗರದ ಇನ್ನೂ 30 ವೃತ್ತಗಳಲ್ಲಿ ಇದೇ ರೀತಿಯ ಪ್ಲಾಜಾ ಮಾಡಲಿದೆ. ಇದರಿಂದ ಸಿಲಿಕಾನ್‌ಸಿಟಿಯ ಅಂದ ಹೆಚ್ಚಲಿದೆ ಎಂದು ಹೇಳಿದರು.


ಕಾರ್ಯಕ್ರಮದ ವಿಶೇಷವೆಂದರೆ, ಮುಖ್ಯಮಂತ್ರಿಗಳು ಸರ್‌ಎಂವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮೇಲೆ ಐಐಟಿ ಪದವೀಧರ ಚಂದನ್ ಎಂಬ ವಿದ್ಯಾರ್ಥಿಯಿಂದಲೂ ಮಾಲಾರ್ಪಣೆ ಮಾಡಿಸಲಾಯಿತು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!