ಜೈಲು ಶಿಕ್ಷೆಗೆ ಗುರಿಯಾಗಿರುವ ಅನುಭವ ಸಿನಿಮಾ ಖ್ಯಾತಿ ಕನ್ನಡ ಚಿತ್ರರಂಗದ ನಟಿ ಅಭಿನಯ ಹಾಗೂ ಅವರ ಕುಟುಂಬ ಪತ್ತೆಗೆ ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜು ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ.
ಅವರ ಪತ್ತೆಗೆ ಬೆಂಗಳೂರು ನಗರ ಚಂದ್ರ ಲೇಔಟ್ ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ.ಅಭಿನಯ ಅವರ ಅತ್ತಿಗೆ ಲಕ್ಷ್ಮೀದೇವಿ ಅವರು ದಾಖಲು ಮಾಡಿದ್ದ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಅಪರಾಧಿಗಳಿಗೆ ಸೆಕ್ಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಅಭಿನಯ ಅವರು ಹೈಕೋರ್ಟ್ಗೆ ಅರ್ಜಿ ಮೇಲ್ ಮನವಿ ಸಲ್ಲಿಕೆ ಮಾಡಿದ್ದರು.
ಅರ್ಜಿ ವಿಚಾರಣೆ ನಡೆದು ಉಚ್ಚ ನ್ಯಾಯಾಲಯ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತ ಹಿಡಿದಿತ್ತು.ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿ ಕೋರ್ಟಿಗೆ ಹಾಜರು ಪಡಿಸಬೇಕಿತ್ತು. ಆದರೆ ಸದ್ಯ ನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸೋದರ ಚೆಲುವರಾಜು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ.
ಪರಿಣಾಮ ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿ, ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿದರೆ ಪೊಲೀಸರಿಗೆ ತಿಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.ನಟಿ ಅಭಿನಯ ತಮ್ಮ ಪೋಷಕರೊಂದಿಗೆ ಸೇರಿಕೊಂಡು ಅಣ್ಣನ ಹೆಂಡತಿ (ಅತ್ತಿಗೆ)ಗೆ ಕಿರುಕುಳ ಕೊಡುತ್ತಿದ್ದರು ಎಂಬ ಆರೋಪ ಅವರ ಮೇಲಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ