ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಗಿರಿಜಯ್ಯನಹಟ್ಟಿ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ನೊಂದ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಆಂಧ್ರಪ್ರದೇಶ ಮೂಲದ 25 ವರ್ಷದ ಪ್ರವಲ್ಲಿಕ ಎಂಬವರು ನೇಣಿಗೆ ಶರಣಾದ ಮಹಿಳೆ. ಪತಿ ಸುದರ್ಶನ್ ರೆಡ್ಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರು ತೀವ್ರ ಅಸ್ವಸ್ಥಗೊಂಡು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯ ಹಿನ್ನೆಲೆಯಲ್ಲಿ ಪತಿ ಸುದರ್ಶನ್ ರೆಡ್ಡಿ, ಮಾವ ಶಿವಾ ರೆಡ್ಡಿ, ಅತ್ತೆ ರಾಜೇಶ್ವರಿ ಹಾಗೂ ಮತ್ತಿತರ ಕುಟುಂಬಸ್ಥರ ವಿರುದ್ಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದರ್ಶನ್ ರೆಡ್ಡಿ ಹಾಗೂ ಪ್ರವಲ್ಲಿಕ ಅವರು 1 ವರ್ಷದ ಹಿಂದೆ ಮದುವೆಯಾಗಿದ್ದರು. ಸುದರ್ಶನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಗಿರಿಜಯ್ಯನಹಟ್ಟಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.ಇದನ್ನು ಓದಿ –ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಾಜಣ್ಣ ಮತ್ತು ಸಿಪಿಐ ವಸಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಗ್ರಾಮದ ಜನರಲ್ಲೂ ಆಘಾತವನ್ನು ಉಂಟುಮಾಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು