ಕೋಲಾರ: ಪತಿ ಮತ್ತು ಆತನ ಕುಟುಂಬಸ್ಥರಿಂದ ನಿರಂತರ ವರದಕ್ಷಿಣೆ ಕಿರುಕುಳವನ್ನು ತಾಳಲಾರದೆ, ಸೌಮ್ಯ (25) ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.
ಸೌಮ್ಯ, ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ನಿವಾಸಿಯಾಗಿದ್ದು, ತನ್ನ ತಾಯಿಯ ಮನೆಗೆ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಗೆ ಬಂದಿದ್ದ ವೇಳೆ ಈ ದುರಂತ ಸಂಭವಿಸಿದೆ.
ಭಾನುವಾರ ರಾತ್ರಿ ಮನೆಯಿಂದ ಹೊರಬಂದು ಸಮೀಪದ ಕೆರೆಗೆ ಹಾರಿ, ಆಕೆ ಜೀವನಕ್ಕೆ ತೆರೆ ಎಳೆದಿದ್ದಾಳೆ. ಕೇವಲ ಎರಡು ವರ್ಷಗಳ ಹಿಂದೆ ಸೌಮ್ಯ, ಸುನಿಲ್ ಕುಮಾರ್ ಎಂಬಾತನೊಂದಿಗೆ ಮದುವೆಯಾಗಿದ್ದಳು.
ಮೃತ ಮಹಿಳೆಯ ಪೋಷಕರು, ಪತಿ ಸುನಿಲ್ ಕುಮಾರ್ ಹಾಗೂ ಆತನ ಕುಟುಂಬವು ನಿರಂತರವಾಗಿ ಕಿರುಕುಳ ನೀಡಿದ್ದರಿಂದ, ಸೌಮ್ಯ ಈ ನಿರ್ಧಾರಕ್ಕೆ ಬಂದಿದ್ದಾಳೆ ಎಂದು ಆರೋಪಿಸಿ, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಹನಿಟ್ರ್ಯಾಪ್‌ನಿಂದ ಮುಮ್ತಾಜ್ ಅಲಿ ಬಲಿ? 6 ಜನರ ವಿರುದ್ಧ ಎಫ್‌ಐಆರ್
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ