ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಹೆಚ್. ಎನ್.ಗೋಪಾಲ ಕೃಷ್ಣ ಅಧಿಕಾರ ಸ್ವೀಕಾರ

Team Newsnap
1 Min Read
Dr. H. N. Gopala Krishna took power as the new district collector of Mandya ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಹೆಚ್. ಎನ್.ಗೋಪಾಲ ಕೃಷ್ಣ ಅಧಿಕಾರ ಸ್ವೀಕಾರ

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಗುರುವಾರ ಡಾ.ಹೆಚ್.ಎನ್.ಗೋಪಾಲ ಕೃಷ್ಣ ಅಧಿಕಾರ ಸ್ವೀಕರಿಸಿದರು.

ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್.ಅಶ್ವತಿ ಅಧಿಕಾರ ಹಸ್ತಾಂತರಿಸಿದರು.ಲಿವಿಂಗ್ ಟುಗೆದರ್ ಗೆ ಕಂಟಕ : ರಾಜ್ಯ ಮಹಿಳಾ ಆಯೋಗಕ್ಕೆ ದೂರುಗಳ ಸುರಿಮಳೆ

ಮಂಡ್ಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಡಾ ಗೋಪಾಲಕೃಷ್ಣ ಅವರು ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು ಎಂದರು.

ಸಾರ್ವಜನಿಕರು ತಮ್ಮ ಕೆಲಸಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳು ನಿಗಧಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪಿಸುವುದು. ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಜಿಲ್ಲಾಡಳಿತ ಒಂದು ತಂಡವಾಗಿ ಕಾರ್ಯ ನಿರ್ವಹಿಸಿ ಪರಿಹರಿಸುತ್ತದೆ ಎಂದರು.

ಈ ಹಿಂದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಆಯುಕ್ತರಾಗಿ, ಚೆಸ್ಕಾಂ ನ ವ್ಯವಸ್ಥಾಪಕ ನಿರ್ದೇಶಕ, ಹಾಸನ ಮತ್ತು ಮಂಗಳೂರಿನಲ್ಲಿ ನಗರ ಪಾಲಿಕೆಗಳ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ತಹಶೀಲ್ದಾರ್ ರೂಪ,ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕರಾದ ಸ್ವಾಮಿಗೌಡ, ಜಿಲ್ಲಾ ವಾರ್ತಾಧಿಕಾರಿ ಎಸ್.ಹೆಚ್. ನಿರ್ಮಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share This Article
Leave a comment