January 30, 2026

Newsnap Kannada

The World at your finger tips!

election , politics , kolar

Siddu will not win in Kolar : Minister Sudhakarಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ - ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

ಆ್ಯಸಿಡ್ ದಾಳಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಿದ ಸುಧಾಕರ್-10 ಲಕ್ಷ ರು ಪರಿಹಾರ

Spread the love

ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಚಿಕಿತ್ಸೆ ನೀಡುತ್ತಿರುವ ಸೇಂಟ್​ ಜಾನ್ಸ್ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ ನೀಡಿ ಯುವತಿಯ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆ ಭೇಟಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ಜೊತೆ ಮಾತನಾಡಿದ್ದೇನೆ. ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಸರ್ಕಾರ ನಿಮ್ಮ ಜೊತೆ ಇದೆ. ಎಲ್ಲಾ ರೀತಿಯ ಚಿಕಿತ್ಸೆಯನ್ನು ನಿಮಗೆ ನೀಡುತ್ತೇವೆ. ನೀವೂ ಧೈರ್ಯವಾಗಿ ಇರಬೇಕು. ಮಾನಸಿಕವಾಗಿ ಧೈರ್ಯವನ್ನು ತಂದುಕೊಳ್ಳಿ ಎಂದು ಹೇಳಿದ್ದೇನೆ ಎಂದರು.

ಆಕೆಯ ಕುಟುಂಬಸ್ಥರು ನೋವಿನಲ್ಲಿ ಇದ್ದಾರೆ ಕಳೆದ ಎರಡು ದಿನದಿಂದ ಅತೀವ ದುಖಃವಾಗಿದೆ.
ಆ್ಯಸಿಡ್​ ದಾಳಿಗೆ ತುತ್ತಾದ ಯುವತಿ ಕುಟುಂಬಕ್ಕೆ ಚಿಕಿತ್ಸೆಯ ಎಲ್ಲಾ ಖರ್ಚು ವೆಚ್ಚಗಳನ್ನು ಸರ್ಕಾರವೇ ನೀಡಬೇಕು ಎಂದು ತೀರ್ಮಾನ ಮಾಡಿದ್ದೇವೆ. ಅಲ್ಲದೇ ಸರ್ಕಾರದಿಂದ ಐದು ಲಕ್ಷ ರು ಪರಿಹಾರದ ಜೊತಗೆ ವೈಯುಕ್ತಿಕವಾಗಿ ಐದು ಲಕ್ಷ ರೂಪಾಯಿ ನೀಡುವುದಾಗಿ ತೀರ್ಮಾನ ಮಾಡಿದ್ದೇನೆ ಎಂದರು.

ಸಂತ್ರಸ್ತೆಗೆ ಸರ್ಕಾರಿ ಕೆಲಸ ನೀಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಪ್ರಕಟಿಸಿದರು.

error: Content is protected !!