ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಚಿಕಿತ್ಸೆ ನೀಡುತ್ತಿರುವ ಸೇಂಟ್ ಜಾನ್ಸ್ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ ನೀಡಿ ಯುವತಿಯ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆ ಭೇಟಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ಜೊತೆ ಮಾತನಾಡಿದ್ದೇನೆ. ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಸರ್ಕಾರ ನಿಮ್ಮ ಜೊತೆ ಇದೆ. ಎಲ್ಲಾ ರೀತಿಯ ಚಿಕಿತ್ಸೆಯನ್ನು ನಿಮಗೆ ನೀಡುತ್ತೇವೆ. ನೀವೂ ಧೈರ್ಯವಾಗಿ ಇರಬೇಕು. ಮಾನಸಿಕವಾಗಿ ಧೈರ್ಯವನ್ನು ತಂದುಕೊಳ್ಳಿ ಎಂದು ಹೇಳಿದ್ದೇನೆ ಎಂದರು.
ಆಕೆಯ ಕುಟುಂಬಸ್ಥರು ನೋವಿನಲ್ಲಿ ಇದ್ದಾರೆ ಕಳೆದ ಎರಡು ದಿನದಿಂದ ಅತೀವ ದುಖಃವಾಗಿದೆ.
ಆ್ಯಸಿಡ್ ದಾಳಿಗೆ ತುತ್ತಾದ ಯುವತಿ ಕುಟುಂಬಕ್ಕೆ ಚಿಕಿತ್ಸೆಯ ಎಲ್ಲಾ ಖರ್ಚು ವೆಚ್ಚಗಳನ್ನು ಸರ್ಕಾರವೇ ನೀಡಬೇಕು ಎಂದು ತೀರ್ಮಾನ ಮಾಡಿದ್ದೇವೆ. ಅಲ್ಲದೇ ಸರ್ಕಾರದಿಂದ ಐದು ಲಕ್ಷ ರು ಪರಿಹಾರದ ಜೊತಗೆ ವೈಯುಕ್ತಿಕವಾಗಿ ಐದು ಲಕ್ಷ ರೂಪಾಯಿ ನೀಡುವುದಾಗಿ ತೀರ್ಮಾನ ಮಾಡಿದ್ದೇನೆ ಎಂದರು.
ಸಂತ್ರಸ್ತೆಗೆ ಸರ್ಕಾರಿ ಕೆಲಸ ನೀಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಪ್ರಕಟಿಸಿದರು.
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
More Stories
ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
ಗೃಹ ಬಳಕೆಯ ಸಿಲಿಂಡರ್ 50 ರು ಏರಿಕೆ- ಇಂದಿನಿಂದಲೇ ಹೊಸ ದರ ಜಾರಿ