ಮಂಡ್ಯ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕುಮಾರ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.
ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಹೆಚ್ಎನ್ ಗೋಪಾಲಕೃಷ್ಣ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರವನ್ನು ಹಸ್ತಾಂತರ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಕುಮಾರ್ ಅವರನ್ನು ಸರ್ಕಾರ ಮಂಡ್ಯ ಜಿಲ್ಲಾಧಿಕಾರಿಯನ್ನಾಗಿ ನಿಯೋಜಿಸಿ ಆದೇಶಿಸಿತ್ತು.
ಈ ಹಿಂದೆ ಉಡುಪಿ, ಮಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ, ವಿಜಯಪುರ ತುಮಕೂರು ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ.
ಅಧಿಕಾರ ಸ್ವೀಕಾರದ ನಂತರ ಮಾತನಾಡಿದ ಕುಮಾರ್ ಕಂದಾಯ ಇಲಾಖೆಯಲ್ಲಿ ಯಾವುದೇ ತೊಂದರೆ ಇದ್ದರೂ ಪರಿಶೀಲಿಸಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ಪಾರದರ್ಶಕ ಹಾಗೂ ಪ್ರತಿಸ್ಪಂಧನಾತ್ಮಕ ಆಡಳಿತವನ್ನು ನೀಡುವುದು ಮುಖ್ಯ ಗುರಿ ಎಂದು ಡಿಸಿ ಹೇಳಿದರು
ಕಂದಾಯ ಇಲಾಖೆಯಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಹಾಗಾಗಿ ಜಿಲ್ಲಾಧಿಕಾರಿ ಕಛೇರಿ ಹಾಗೂ ಕಂದಾಯ ಇಲಾಖೆ ಯಾವುದೇ ಸಮಸ್ಯೆ ಇದ್ದಲ್ಲಿ ಪರೀಶಿಲನೆ ನಡೆಸಿ ಸಕಲಾತ್ಮಕವಾಗಿ ಸ್ಪಂದಿಸಿ ಸಾರ್ವಜನಿಕರಿಗೆ ಬಹುಬೇಗ ಆಡಳಿತ ಸೇವೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡುವೆ ಎಂದರು.
ಪಾರದರ್ಶಕವಾಗಿ ಆಡಳಿತ ನಡೆಸಿ ಸಾರ್ವಜನಿಕರಿಗೆ ಬಹುಬೇಗ ಆಡಳಿತ ಸೇವೆ ತಲುಪಿಸುವುದು. ಈ ಮೂಲಕ ಕಡತ ವಿಲೇವಾರಿಗೆ ಕ್ರಮ ಕೈಗೊಳ್ಳುತ್ತೇನೆ ಎಂದರು.
ಅಧಿಕಾರ ಎಂಬುದು ಸಾರ್ವಜನಿಕರ ಸೇವೆ ಮಾಡಲು ಸಿಕ್ಕಿರುವ ಅವಕಾಶ. ರೈತರಿಗೆ ಭೂಮಿ ತಂತ್ರಾಂಶ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಕಲಾಮಿತಿಯೊಳಗೆ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.ಶಕ್ತಿ ಯೋಜನೆ – ವಾರದಲ್ಲಿ ಸಂಚಾರ ಮಾಡಿದ ಮಹಿಳೆಯರೆಷ್ಟು? ಖರ್ಚು ಎಷ್ಟು?
ಕೃಷಿಕರ ಸಮಸ್ಯೆಗಳನ್ನು ಆದ್ಯತೆ ನೀಡಿ ಪರಿಹರಿಸಲಾಗುವುದು. ಮಳೆಯ ಕೊರತೆ ಉಂಟಾದಲ್ಲಿ ಉಂಟಾಗಬಹುದಾದ ತೊಂದರೆ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಕೂಡಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ