ರಾಮನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ: ರಾಕೇಶ್ ಕುಮಾರ್ ಕೆ. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು.
ಡಾ: ರಾಕೇಶ್ ಕುಮಾರ್ ಬೆಂಗಳೂರಿನ ಜಿ.ಕೆ.ವಿ.ಕೆ ಯಲ್ಲಿ ಕೃಷಿ ಪದವಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರ್ ಸೈನ್ಸ್ ನಲ್ಲಿ ಎಂ.ಎಸ್ಸಿ ಪದವಿ ಹಾಗೂ ಪಿ.ಹೆಚ್.ಡಿಯೊಂದಿಗೆ ಡಾಕ್ಟರೇಟ್ ಪಡೆದುಕೊಂಡಿದ್ದಾರೆ.
2012ನೇ ಬ್ಯಾಚ್ ನ ಐ.ಎ.ಎಸ್. ಅಧಿಕಾರಿಯಾಗಿದ್ದಾರೆ. ಈ ಹಿಂದೆ ಇವರು ಜಮಖಂಡಿಯಲ್ಲಿ ಉಪವಿಭಾಗಾಧಿಕಾರಿಯಾಗಿ, ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮತ್ತು ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಹಾಗೂ ಪ್ರವಾಸೋದ್ಯಮ ಇಲಾಖೆಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲಾಧಿಕಾರಿಗಳು ಜಿಲ್ಲಾ ಸಂಕೀರ್ಣದಲ್ಲಿರುವ ಪ್ರವಾಸೋದ್ಯಮ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆ, ಭೂದಾಖಲೆಗಳ ಉಪನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಇನ್ನಿತರ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು