February 22, 2026

Newsnap Kannada

The World at your finger tips!

sidda

Pic Credits : deccanherald.com

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲಿಸಿದ ಪುತ್ರ ಡಾ. ಯತೀಂದ್ರ

Spread the love

ಕಳೆದ ರಾತ್ರಿ ಯಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಆರೋಗ್ಯ ತಪಾಸಣೆಗಾಗಿ ಪುತ್ರ ಯತೀಂದ್ರ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ವೈದ್ಯರ ಸಲಹೆ ಮೇರೆಗೆ ತಪಾಸಣೆಗೆ ಒಳಗಾಗುತ್ತಿದ್ದು, ವೈದ್ಯಕೀಯ ತಪಾಸಣೆ ನಂತರ ಅಡ್ಮಿಟ್ ಆಗಲು ಹೇಳಿದರೆ 2 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗುವ ಸಾಧ್ಯತೆ ಇದೆ.

ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದಾರೆ ತಪಾಸಣೆ ನಂತರ ಆಸ್ಪತ್ರೆಗೆ ಅಡ್ಮಿಟ್ ಆಗಬೇಕೋ ಬೇಡವೋ ಎಂಬುದನ್ನು ತೀರ್ಮಾನಿಸಲಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ತಗುಲಿತ್ತು, ಬಳಿಕ ಗುಣಮುಖರಾಗಿದ್ದರು.

ಇಂದೂ ಸಹ ನಡೆಸಲಾದ ಕೊರೋನಾ ಟೆಸ್ಟ್ ನಲ್ಲಿ ಸಿದ್ದರಾಮಯ್ಯ ನವರಿಗೆ ನೆಗಟಿವ್ ವರದಿ ಬಂದಿದೆ.

error: Content is protected !!