ರಾಜ್ಯದಲ್ಲಿ ಮೂರನೇ ಒಮಿಕ್ರಾನ್ ಸೋಂಕು ದೃಢವಾಗಿದೆ.
ಆಫ್ರಿಕಾದಿಂದ ರಾಜ್ಯಕ್ಕೆ ಆಗಮಿಸಿದ್ದ ವ್ಯಕ್ತಿಯಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.
ಈ ಸಂಗತಿಯನ್ನು ದೃಢಪಡಿಸಿರುವ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ರಾಜ್ಯದಲ್ಲಿ ಓಮಿಕ್ರಾನ್ ಮೂರನೇ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿರುವ 34 ವರ್ಷದ ವ್ಯಕ್ತಿಯ ರಿಪೋರ್ಟ್ ಪಾಸಿಟಿವ್ ಬಂದಿದ್ದು, ಅವರನ್ನು ಪ್ರತ್ಯೇಕ ಮಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 5 ಮಂದಿ ಮತ್ತು ದ್ವಿತೀಯ ಸಂಪರ್ಕದ 15 ಮಂದಿಯನ್ನು ಗುರುತಿಸಲಾಗಿದೆ.
ಅವರಿಗೂ ಟೆಸ್ಟ್ ಮಾಡಲು ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ