ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕಡೋಳ ಗ್ರಾಮದ ಬಳಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಲಬುರ್ಗಿಯ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ಸಾವನ್ನಪ್ಪಿದ ಘಟನೆ ಜರುಗಿದೆ.
ಕಾರಿನಲ್ಲಿದ್ದ ಅವರ ಪತ್ನಿಗೆ ಗಾಯಗಳಾಗಿದ್ದು, ಇಬ್ಬರು ಪುತ್ರರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.
ಬಸವ ಕಲ್ಯಾಣ ನೋಡಲು ಕುಟುಂಬ ಸದಸ್ಯರೊಂದಿಗೆ ತೆರಳಿ, ವಾಪಸ್ ಬರುವಾಗ ಲಿಂಗರಾಜ್ ಶಾಸ್ತ್ರಿ ಅವರ ಪುತ್ರ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ.
ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ.
ಕಾರು ಡಿಕ್ಕಿ ಹೊಡೆಯುತ್ತಿದ್ದಂತೆಯೇ ಏರ್ ಬ್ಯಾಗ್‌ಗಳು ತೆರೆದುಕೊಂಡಿದೆಯಾದರೂ ಗಂಭೀರ ಗಾಯಗಳಾದ ಪರಿಣಾಮ ಶಾಸ್ತ್ರಿ (50) ಸಾವನ್ನಪ್ಪಿದರು.
ಅಪಘಾತ ಸಂಭವಿಸಿದ ಸ್ಥಳದಲ್ಲಿ ಜೇನು ಹುಳು ದಾಳಿಯೂ ನಡೆದಿದೆ. ಹೀಗಾಗಿ ಶಾಸ್ತ್ರಿ ಅವರ ಪತ್ನಿಗೆ ವಿಪರೀತವಾಗಿ ಗಾಯಗೊಂಡಿದ್ದಾರೆ, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
More Stories
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು