December 25, 2024

Newsnap Kannada

The World at your finger tips!

Rajya shabha

ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ

Spread the love

ಸಮಾಜ ಸೇವೆ , ಶಿಕ್ಷಣ , ಆರೋಗ್ಯ, ಸಂಗೀತ, ಕ್ರೀಡೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ದಕ್ಷಿಣ ಭಾರತದ ನಾಲ್ವರು ದಿಗ್ಗಜರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ.

rajya shabh a 1

ಈ ವಿಷಯವನ್ನು ಪ್ರಧಾನಿ ಮೋದಿಯವರೇ ಟ್ವಿಟರ್ ನಲ್ಲಿ ಪ್ರಕಟಿಸಿ, ಗಣ್ಯರಿಗೆ ಗೌರವ ಸಲ್ಲಿಸಲಾಗಿದೆ ಎಂದಿದ್ದಾರೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ , ಸಂಗೀತ ನಿರ್ದೇಶಕ ಇಳಯ ರಾಜ, ಪಿ ಟಿ ಉಷಾ ಹಾಗೂ ರಾಜಮೌಳಿ ತಂದೆ ಕೆ ವಿ ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ.

ILLYARAJA RAJYASABHA

ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!