ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಚಾಲನೆ

Team Newsnap
1 Min Read

ನ್ಯೂಸ್ ಸ್ನ್ಯಾಪ್.

ಮೈಸೂರು.

ನಟ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಬೇಕೆಂಬ ಬಹು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಆನ್ ಲೈನ್ ಮೂಲಕ ಚಾಲನೆ ನೀಡಿದರು.

ಮೈಸೂರಿನ ಹೊರ ವಲಯದ ಎಚ್.ಡಿ.ಕೋಟೆ ರಸ್ತೆಯ ಉದ್ಭೂರು ಗೇಟ್ ಬಳಿಯ ಹಾಲಾಳುವಿನಲ್ಲಿ 5.5 ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಾಣವಾಗಲಿದೆ. ಚಿತ್ರ ಕಲಾವಿದರೊಬ್ಬರಿಗೆ ಈ ಮೂಲಕ ಸರ್ಕಾರ ಗೌರವ ಸಮರ್ಪಣೆ ಮಾಡಿದಂತಾಗಿದೆ. ವಿಷ್ಣವರ್ಧನ್ ಹುಟ್ಟೂರಿನಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂಬ ಅಭಿಮಾನಗಳ ಕೂಗಿಗೆ ಪ್ರತಿಫಲ ಸಿಕ್ಕಂತಾಗಿದೆ. ವಿಷ್ಣು ಅವರ ವಿದ್ಯಾಭ್ಯಾಸ ಸಹ ಮೈಸೂರಿನಲ್ಲಿಯೇ ಆಗಿತ್ತು. ಅವರಿಗೂ ಹಾಗೂ ಮೈಸೂರಿಗೂ ಅವಿನಾಭಾವ ನಂಟಿದೆ.

11 ಕೋಟಿ ರು. ಯೋಜನೆಯನ್ನು 5.5 ಎಕರೆ ಜಾಗದಲ್ಲಿ 2 ಎಕರೆಯಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ತಲೆ ಎತ್ತಲಿದೆ. ಜೊತೆಗೆ 6 ಅಡಿ ಎತ್ತರದ ವಿಷ್ಣುವರ್ಧನ್ ಅವರ ಪುತ್ಥಳಿಯನ್ನೂ ಕೂಡ ನಿರ್ಮಿಸಲಾಗಿದೆ. ಪುಣೆಯ ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾದ ಶಾಖೆ ಸಹ ಇಲ್ಲಿ ಆರಂಭವಾಗಲಿದೆ. ಇದರ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಂತಾಗುತ್ತದೆ. ಅಲ್ಲದೆ, ಇಲ್ಲಿ ಮ್ಯೂಸಿಯಂ ಸಹ ನಿರ್ಮಾಣಗೊಳ್ಳುವುದರಿಂದ ವಿಷ್ಣು ನೆನಪುಗಳು ಚಿತ್ರರಸಿಕರ ಕಣ್ಮನ ಸೆಳೆಯಲಿದೆ ಎಂದು ಹೇಳಲು ಸಂತಸವಾಗುತ್ತದೆ.

ಭಾರತಿ ವಿಷ್ಣುವರ್ಧನ್ ಹಾಗೂ ಕುಟುಂಬದವರಿಗೆ ಸರ್ಕಾರದಿಂದ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು.

Share This Article
Leave a comment