March 14, 2026

Newsnap Kannada

The World at your finger tips!

santhosh patil 1

ಸಂತೋಷ್ ಪಾಟೀಲ್ ಅಂತ್ಯಕ್ರಿಯೆ : ಸಂಬಂಧಿಕರಿಂದಲೇ ಹೈಡ್ರಾಮಾ

Spread the love

ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರ ಮಧ್ಯೆಯೇ ಕೈ ಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನಡೆದಿದೆ.

ಸಂತೋಷ್ ಮೃತದೇಹವನ್ನು ಬೆಳಗಾವಿಯಲ್ಲಿರುವ ಅವರ ಮನೆ ಮುಂದೆ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಥಳಕ್ಕೆ ಆಗಮಿಸಿದ್ದರು.

ಈ ವೇಳೆ ಶಾಸಕಿ ಮಾತನಾಡಿ, ಸಂತೋಷ್ ಆತ್ಮಹತ್ಯೆಗೆ ನ್ಯಾಯ ಸಿಗಬೇಕು. ಜೊತೆಗೆ ಪರಿಹಾರ ಸಿಗಬೇಕು. ಅಲ್ಲಿಯವರೆಗೂ ಸಂತೋಷ್ ಅವರ ಮೃತದೇಹವನ್ನು ಕದಲಿಸುವುದು ಬೇಡ ಎಂದು ಹೇಳಿದ್ದಾರೆ.

ಶಾಸಕಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಂತೋಷ್ ಸಂಬಂಧಿಗಳು ಅಂತ್ಯಕ್ರಿಯೆ ಮಾಡೋಣ. ಸಂತೋಷ್ ಮೃತದೇಹ ಇಟ್ಟು ಪ್ರತಿಭಟನೆ ಮಾಡುವುದು ಬೇಡ ಎಂದಿದ್ದರು.

ಆ ಬಳಿಕ ಸಂತೋಷ್ ಪಾಟೀಲ್ ಸಂಬಂಧೀಕರ ಮಧ್ಯೆಯೇ ಕೈಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದಿದೆ. ಕೂಡಲೇ ಅಲ್ಲಿದ್ದ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಇಬ್ಬರನ್ನೂ ಶಾಂತ ಪಡಿಸಿದರು.
ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮನೆಯಿಂದ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಸಂತೋಷ್ ಪಾಟೀಲ್ ಅವರ ಮೃತದೇಹ ರವಾನೆ ಆಗಿದೆ. ಗ್ರಾಮದ ಹೊರವಲಯದ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಗ್ರಾಮದ ಪ್ರಮುಖ ರಸ್ತೆಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಲಿದ್ದು, ಲಿಂಗಾಯತ ವಿಧಿ ವಿಧಾನದಂತೆ ನೆರವೇರಲಿರುವ ಸಂತೋಷ ಪಾಟೀಲ್ ಅಂತ್ಯಕ್ರಿಯೆ ನಡೆಯಲಿದೆ.

error: Content is protected !!