July 6, 2022

Newsnap Kannada

The World at your finger tips!

WhatsApp Image 2022 06 22 at 12.15.17 PM

ಶಿವ ದೇವಸ್ಥಾನದ ಕಸಗುಡಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

Spread the love

ಬಿಜೆಪಿ ನೇತೃತ್ವದ ಎನ್‍ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಇಂದು ಶಿವನ ದೇವಸ್ಥಾನದ ನೆಲವನ್ನು ಗುಡಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ದ್ರೌಪದಿ ಮುರ್ಮು ತಮ್ಮ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‍ಪುರದಲ್ಲಿರುವ ಶಿವನ ದೇವಾಲಯಕ್ಕೆ ಇಂದು ಭೇಟಿ ಕೊಟ್ಟಿದ್ದಾರೆ. ಈ ವೇಳೆ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೊದಲು ದೇವಾಲಯದ ನೆಲವನ್ನು ಗುಡಿಸಿದ್ದಾರೆ.

ದ್ರೌಪದಿ ಮುರ್ಮು ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ – ಪ್ರಧಾನಿ ಮೋದಿ ವಿಶ್ವಾಸ

ದ್ರೌಪದಿ ಮುರ್ಮುರಾಷ್ಟ್ರಪತಿಯಾಗಿ ಆಯ್ಕೆಯಾದರೆ, ದೇಶದ ಉನ್ನತ ಹುದ್ದೆಗೆ ಆಯ್ಕೆಯಾದ ಒಡಿಶಾದ ಮೊದಲ ವ್ಯಕ್ತಿಯಾಗುತ್ತಾರೆ. ಅಲ್ಲದೇ ಭಾರತದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಲಿದ್ದಾರೆ.

error: Content is protected !!