ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್‌ನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮೈಸೂರು ವಿಶ್ವವಿದ್ಯಾನಿಲಯದ 101ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು.
ನಂತರ ಕೋವಿಡ್ ನಿಯಮಾವಳಿಯಂತೆ ನಡೆದ ಕಾರ್ಯಕ್ರಮದಲ್ಲಿ 244 ಪಿಎಚ್ಡಿ, 387 ಚಿನ್ನದ ಪದಕ ಪಡೆದವರಿಗೆ ರಾಜ್ಯಪಾಲರು, ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ವಿವಿಯ ಸಮಕುಲಾಧಿಪತಿ ಸಿಎನ್ ಅಶ್ವತ್ಥ್ ನಾರಾಯಣ ಹಾಗೂ ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಪದವಿ ಪ್ರದಾನ ಮಾಡಿದರು.
ಪದ್ಮಭೂಷಣ ಡಾ.ಗೋಂವಿದರಾಜನ್ ಪದ್ಮನಾಭನ್ ಮತ್ತು ವಿಷನ್ ಗ್ರೂಪ್ ಆನ್ ಸ್ಟಾರ್ಟ್ ಅಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಿಎಸ್ ಐಆರ್ ಮಹಾ ನಿರ್ದೇಶಕ ಹಾಗೂ ಡಿಎಸ್ ಐಆರ್ ಕಾರ್ಯದರ್ಶಿ ಡಾ.ಶೇಕರ್ ಸಿ ಮಂಡೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ