October 6, 2024

Newsnap Kannada

The World at your finger tips!

police 1

ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ತಪ್ಪಿತಸ್ಥ : ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸು

Spread the love

ಬೆಂಗಳೂರು : ನಾಗಮಂಗಲ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಕುರಿತು ಸಿಐಡಿ ವರದಿ ಹಾಗೂ ಶಿಫಾರುಗಳ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಗೆ ಮಾಹಿತಿ ನೀಡಿದರು.

ಅಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿದ ವರದಿಯನ್ನು ಶುಕ್ರವಾರ ಗೃಹ ಸಚಿವರು ವಿಧಾನಸಭೆಯಲ್ಲಿ ಮಂಡಿಸಿದರು.

ಈ ವರದಿಯಲ್ಲಿ ನಾಗಮಂಗಲ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡರು ತಪ್ಪಿತಸ್ಥರು ಮತ್ತು ಅವರ ವಿರುದ್ದ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿದೆ. ಚಾಲಕ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಸಿಐಡಿ ತಿಳಿಸಿದೆ ಎಂದು ಹೇಳಿದರು.

ನಿಗಮದ ವಿಭಾಗೀಯ ನಿಯಂತ್ರಕರು ಜಗದೀಶ್‌ ಅವರನ್ನು ಮದ್ದೂರು ಘಟಕಕ್ಕೆ ವರ್ಗಾವಣೆ ಮಾಡಿದ್ದರು. ಅಲ್ಲಿಗೆ ಹೋಗಲು ಇಷ್ಟವಿಲ್ಲದೆ ಆತ್ಮಹತ್ಯೆಗೆ ಯತ್ನಿಸಿದ್ದರು.

ಈ ವರ್ಗಾವಣೆ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು ಎಂಬುದು ಸಿಐಡಿ ತನಿಖೆಯಲ್ಲಿ ಬಹಿರಂಗವಾಗಿದೆ

ಆತ್ಮಹತ್ಯೆಗೆ ಯತ್ನಿಸಿದ್ದ ಜಗದೀಶ್‌ ಮತ್ತು ಆತ್ಮಹತ್ಯೆಗೆ ಅನುಮತಿ ಕೋರುವ ಪತ್ರ ಬರೆದುಕೊಟ್ಟಿದ್ದ ಮತ್ತೊಬ್ಬ ಚಾಲಕ ಎಂ.ಎಸ್‌. ನವೀನ್‌ಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ನಿಗಮದ ನಾಗಮಂಗಲ ಘಟಕದ ಸಹಾಯಕ ಕಾರ್ಯ ಅಧೀಕ್ಷಕ ಎಸ್‌.ಎಲ್‌. ಮಂಜುನಾಥ್‌ ಕರ್ತವ್ಯಲೋಪ ಎಸಗಿರುವುದು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸದೇ ಠಾಣಾಧಿಕಾರಿ ಅಶೋಕ್‌ ಕುಮಾರ್‌ ಮತ್ತು ಪೊಲೀಸ್‌ ಇನ್‌ಸ್ಪೆಕ್ಟರ್‌ ಕೂಡ ಲೋಪ ಎಸಗಿದ್ದಾರೆ. ಅವರ ವಿರುದ್ಧವೂ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ
ಎಂದು ವಿವರ ನೀಡಿದರು.

ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾಜಿ ಶಾಸಕ ಸುರೇಶ್‌ ಗೌಡ ಅವರು ಆಂಬುಲೆನ್ಸ್‌ ತಡೆದಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು, ಪ್ರಕರಣ ಸಂಬಂಧ 38 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಆತ್ಮಹತ್ಯೆಗೆ ಯತ್ನಕ್ಕೆ ಯಾವುದೇ ಪ್ರಚೋದನೆಗಳೂ ಕಂಡುಬಂದಿಲ್ಲ ಎಂದು ಹೇಳಿದರು.ಜಲಾಶಯಗಳ ನೀರಿನ ಮಟ್ಟ – 21-7-2023

ಶಾಸಕ ಪಿ.ಎಂ. ನರೇಂದ್ರಸ್ವಾಮಿ ವರದಿಗೆ ಆಕ್ಷೇಪ ವ್ಯಕ್ತಪಡಿಸಿದರು. ಈ ಪ್ರಕರಣವನ್ನು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ. ಕಾಂಗ್ರೆಸ್‌ ಶಾಸಕರನ್ನು ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ನಡೆದಿದೆ. ಈ ಸಂಚಿನ ಹಿಂದಿರುವವರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿದರು.

Copyright © All rights reserved Newsnap | Newsever by AF themes.
error: Content is protected !!