ತುಮಕೂರು:ಕೃಷಿ ಹೊಂಡದಲ್ಲಿ ನಡೆದ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ (Drone Prathap) ಅವರನ್ನು ಡಿಸೆಂಬರ್ 26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಸೋಮವಾರ ಆದೇಶ ನೀಡಿದೆ.
ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ನಂತರ ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯಕ್ಕೆ ಕರೆತರುವ ಮುನ್ನ, ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್ ಅವರ ಆರೋಗ್ಯ ತಪಾಸಣೆ ನಡೆಸಲಾಯಿತು. ನ್ಯಾಯಾಲಯದ ಆದೇಶದ ಬಳಿಕ, ಪ್ರತಾಪ್ ಅವರನ್ನು ಮಧುಗಿರಿ ಸಬ್ ಜೈಲಿಗೆ ಕರೆದೊಯ್ಯಲಾಯಿತು.
ಸೋಡಿಯಂ ಬ್ಲಾಸ್ಟ್ ಪ್ರಕರಣದ ಇತಿಹಾಸ:
ಈ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರ ಸ್ನೇಹಿತರಾದ ವಿನಯ್ ಹಾಗೂ ಸೋಡಿಯಂ ಒದಗಿಸಿದ್ದ ಪ್ರಜ್ವಲ್ ಅವರನ್ನು ಮಿಡಿಗೇಶಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ತನಿಖೆಯ ಪ್ರಾಥಮಿಕ ವರದಿ ಪ್ರಕಾರ, ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಿಂದ ಸೋಡಿಯಂ ಖರೀದಿಸಿದ್ದರು.
ಶನಿವಾರ ಮಧ್ಯರಾತ್ರಿ ಬೆಂಗಳೂರಿನಲ್ಲಿ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ. ಆದರೆ, ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಮತ್ತು ಫಾರ್ಮ್ ಹೌಸ್ ಮಾಲೀಕ ಜಿತೇಂದ್ರ ಜೈನ್ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನು ಓದಿ –ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಈ ಪ್ರಕರಣದಲ್ಲಿ ತನಿಖೆ ಮುಂದುವರಿಯುತ್ತಿದ್ದು, ಇನ್ನೂ ಹೆಚ್ಚಿನ ಮಾಹಿತಿಗಾಗಿ ವಿಚಾರಣೆ ನಡೆಸಲಾಗುತ್ತಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ