Karnataka

ಬರ ನಿರ್ವಹಣೆ : 31 ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ: ಕೃಷಿ ಸಚಿವರು

ಬೆಳಗಾವಿ : (ಸುವರ್ಣ ಸೌಧ ) ಭೀಕರ ಬರಗಾಲ ಎದುರಿಸಲು ಕುಡಿಯುವ ನೀರಿನ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಮಂಗಳವಾರ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಗೋವಿಂದರಾಜು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಆರ್‌ಬಿಐ ನಿರ್ದೇಶನದಂತೆ ರೈತರ ಬೆಳೆ ಸಾಲದ ಮರುಪಾವತಿ ಅವಧಿಯನ್ನು ಅಲ್ಪಾವಧಿಯಿಂದ ಮಧ್ಯಾವಧಿ ಅಥವಾ ದೀರ್ಘಾವಧಿವರೆಗೆ ರೀ ಸ್ಟçಕ್ಚರ್ ಮಾಡಲು ಎಸ್‌ಎಲ್‌ಬಿಸಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 236 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ವರದಿಯನ್ವಯ 46.11 ಲಕ್ಷ ಹೆಕ್ಟೇರ್ ಕೃಷಿ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಸೇರಿದಂತೆ ಒಟ್ಟು 48.17 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದು, ಬೆಳೆಹಾನಿ ಇನ್‌ಪುಟ್ ಸಬ್ಸಿಡಿಗೆ ಎನ್‌ಡಿಆರ್‌ಎಫ್ ಅಡಿಯಲ್ಲಿ ರೂ.4663.12 ಕೋಟಿ ರೂ.ಗಳ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನವನ್ನು ನಿರೀಕ್ಷಿಸಿ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಬೆಳೆಹಾನಿ ಪರಿಹಾರದ ಮೊಲದನೇ ಕಂತಾಗಿ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ 2000 ರೈತರಿಗೆ ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಕೋಲಾರ ಜಿಲ್ಲೆಯಲ್ಲಿ ಶೇ.11ರಷ್ಟು ಮಳೆ ಕೊರತೆಯಾಗಿದೆ. ಈಲ್ಲೆ ಆರೂ ತಾಲೂಕುಗಳಲ್ಲಿ ಸುಮಾರು 219.87 ಕೋಟಿ ರೂ.ನಷ್ಟವಾಗಿದೆ. ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನಷ್ಟವನ್ನು ಅಂದಾಜು ಮಾಡಿದ್ದಾರೆ. ಬೇಸಿಗೆಯ ಬಗ್ಗೆ ಭೀತಿ ಮೂಡಿದೆ ಎಂದು ಇದೆ ವೇಳೆ ಗೋವಿಂದರಾಜು ಅವರು ತಿಳಿಸಿದರು.ಅನ್ನಭಾಗ್ಯ : ಹಣ ಮನೆಯ 2ನೇ ಯಜಮಾನರ ಖಾತೆಗೆ

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಶು ಸಂಗೋಪನೆ ಇಲಾಖೇಯ ವರದಿಯನುಸಾರ ಕೋಲಾರ ಜಿಲ್ಲೆಯಲ್ಲಿ 2.23 ಲಕ್ಷ ಟನ್ ಮೇವು ಲಭ್ಯವಿದೆ. ಎಸ್‌ಡಿಆರ್‌ಎಫ್ ಅಡಿಯಲ್ಲಿ ಮೇವಿನ ಕಿರು ಪೊಟ್ಟಣಗಳನ್ನು ನಿಯಮಾನುಸಾರ ಖರೀದಿಸಲು 20 ಕೋಟಿ ರೂ. ಗಳನ್ನು ಪಶು ಸಂಗೋಪನೆ ಇಲಾಖೆಗೆ ಬಿಡುಗಡೆಗೊಳಿಸಲಾಗಿದೆ. 31 ಜಿಲ್ಲೆಗಳಿಗೆ ಬಿಡುಗಡೆ ಮಾಡಿದ 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ ಪೈಕಿ ಕೋಲಾರ ಜಿಲ್ಲೆಗೆ 9 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈಲ್ಲೆಯ 4 ಗ್ರಾಮಗಳಲ್ಲಿ ಖಾಸಗಿ ಬೋರವೆಲ್ ಮೂಲಕ ಬಾಡಿಗೆ ಆಧಾರದ ಮೇಲೆ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024