ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಿಂದ ಮಳವಳ್ಳಿಯಲ್ಲಿ ಬರ‌ ಪರಿಸ್ಥಿತಿ : ಬೆಳೆ ನಾಶ ಪರಿಶೀಲನೆ

Team Newsnap
1 Min Read

ಮಳವಳ್ಳಿ : ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಂಗಳವಾರ ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳ ಬೆಳೆ ಹನಿ ಉಂಟಾಗಿರುವ ಸ್ಥಳ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ, ಕೇಂದ್ರಕ್ಕೆ ವರದಿ ಸಲ್ಲಿಸಿದೆ ಎಂದರು.

ಇಂದಿನ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಕೇಂದ್ರ ಸರ್ಕಾರದ ಹಣ ಬಿಡುಗಡೆ ಮಾಡುವುದು ತಡವಾದರೆ, ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ ಎಂದರು.

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 18 ಸಾವಿರ ಕೋಟಿ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದ ನಂತರ ಹಂತ ಹಂತವಾಗಿ ಪರಿಹಾರ ವಿತರಿಸುತ್ತೇವೆ‌ ಎಂದರು.

ರೈತರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತದೆ. ಕೇಂದ್ರ ತಂಡ ಬೆಳೆ ಸಮಿಕ್ಷೆ ನಡೆಸಿ ವರದಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಜನರ ಪರ ಕೆಲಸ ಮಾಡುತ್ತದೆ.ಕರುನಾಡ ಜಿಲ್ಲೆಗಳ ಕಿರು ಪರಿಚಯ -21- ಹಾಸನ

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಡಾ: ಕುಮಾರ್ ,ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು .

Share This Article
Leave a comment