ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ
ಬಿಗ್ ಬಾಸ್ ಸ್ಪರ್ಧಿ ಆ್ಯಡಂ ಪಾಷಾರನ್ನು ಬೆಂಗಳೂರಿನ ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್
ಕೇಸ್ ನ ವಿಚಾರಣೆಗೆ ಕರೆಸಿದ್ದ ಅಧಿಕಾರಿಗಳು ಆ್ಯಡಂ ಪಾಷಾರನ್ನು ಅರೆಸ್ಟ್ ಮಾಡಿದ್ದಾರೆ.
ಕಳೆದ ಬಿಗ್ ಬಾಸ್ ಸೀಸನ್ ನಲ್ಲಿ ಸ್ಪರ್ಧಿಯಾಗಿದ್ದ ಪಾಷಾ ಬಂಧಿತ ಅನಿಕಾಳಿಂದ ಡ್ರಗ್ ಖರೀದಿ ಮಾಡಿದ್ದರು ಎಂಬ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಪಾಷಾರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಡ್ರಗ್ ಲಿಂಕ್ ಆರೋಪ ಪ್ರಕರಣದಲ್ಲಿ ಈ ಹಿಂದೆಯೇ ಆ್ಯಡಂ ಪಾಷಾ ಹೆಸರು ಕೇಳಿ ಬಂದಿತ್ತು. ಆದರೆ ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಪಾಷಾ ಅನಿಕಾ ನನ್ನ ಸ್ನೇಹಿತೆ. ಆಕೆಯ ಜೊತೆ ನನ್ನ ಸ್ನೇಹ ಇದೆ. ಆದರೆ ಡ್ರಗ್ ಲಿಂಕ್ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದರು.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ