ಡ್ರಗ್ಸ್ ದಂಧೆ ಕೇಸ್ – ಮಣಿಪಾಲ ವಿವಿಯ 42 ವಿದ್ಯಾರ್ಥಿಗಳು ಅಮಾನತು

Team Newsnap
1 Min Read
Drug trafficking case – 42 students of Manipal University suspended ಡ್ರಗ್ಸ್ ದಂಧೆ ಕೇಸ್ – ಮಣಿಪಾಲ ವಿವಿಯ 42 ವಿದ್ಯಾರ್ಥಿಗಳು ಅಮಾನತು

ಮಾದಕ ವ್ಯಸನ ಪ್ರಕರಣದಲ್ಲಿ ಭಾಗಿಯಾಗಿದ್ದ 42 ವಿದ್ಯಾರ್ಥಿಗಳನ್ನು ಮಣಿಪಾಲ ವಿಶ್ವವಿದ್ಯಾನಿಲಯವು ಅಮಾನತುಗೊಳಿಸಿದೆ.

ವಿಶ್ವವಿದ್ಯಾಲಯ ಹಾಗೂ ಪೊಲೀಸರು ನಡೆಸಿದ ಆಂತರಿಕ ತನಿಖೆಯಲ್ಲಿ ದೃಢಪಟ್ಟನಂತರ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಮಟ್ಟಿಗೆ ಅಮಾನತುಗೊಳಿಸಿ ವಿವಿ ಆದೇಶಿಸಿದೆ.ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್: ಹಣ ಅಕ್ರಮ ವರ್ಗಾವಣೆ – ವ್ಯಕ್ತಿಯ ಬಂಧನ 

ಭವಿಷ್ಯದ ದೃಷ್ಟಿಯಿಂದ ಈ ದಿಟ್ಟ ನಿರ್ಧಾರವು ಆರೋಗ್ಯಕರ ವಾತಾವರಣ ಸೃಷ್ಟಿಸಲು ಬದ್ಧರಾಗಿರುವುದಾಗಿ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿಂದೆ ಮಂಗಳೂರಿನಲ್ಲಿ ವೈದ್ಯರ ಡ್ರಗ್ಸ್ ಪ್ರಕರಣ ಭಾರೀ ಸುದ್ದಿಯಾಗಿತ್ತು. ಎಡಿಜಿಪಿ ಅಲೋಕ್ ಕುಮಾರ್ ಡ್ರಗ್ಸ್ ದಂಧೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದೀಗ ಮಣಿಪಾಲ ವಿವಿ ಕಟ್ಟುನಿಟ್ಟಿನ ನಿರ್ಧಾರ ಕೈಗೊಂಡಿದ್ದು, ಒಂದು ತಿಂಗಳ ಕಾಲ ವಿದ್ಯಾರ್ಥಿಗಳನ್ನ ಅಮಾನತುಗೊಳಿಸಿದೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚೀಂದ್ರ ಮಾತನಾಡಿ, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಾವು ಹಲವಾರು ಡ್ರಗ್ಸ್ ಪ್ರಕರಣಗಳನ್ನು ಪತ್ತೆ ಮಾಡಿದ್ದೇವೆ. ಈ ಕಾರ್ಯಾಚರಣೆಯಲ್ಲಿ ಅನೇಕ ಮಂದಿ ಪೆಡ್ಲರ್ ಗಳನ್ನ ವಶಕ್ಕೆ ತೆಗೆದುಕೊಂಡಿದ್ದೇವೆ. ಪೆಡ್ಲರ್‌ಗಳ ಮೂಲಕ ಗ್ರಾಹಕರು ಯಾರು ಎಂಬುದು ಪತ್ತೆಯಾಗಿದೆ.

ಮಣಿಪಾಲ ವಿವಿಯ ಕೆಲ ವಿದ್ಯಾರ್ಥಿಗಳು ಕೂಡಾ ಪೆಡ್ಲರ್‌ಗಳಾಗಿದ್ದಾರೆ ಎಂಬುದೂ ತನಿಖೆಯಲ್ಲಿ ತಿಳಿದುಬಂದಿದೆ. ಹೆಚ್ಚಿನ ಪ್ರಮಾಣದ ಮಾದಕ ದ್ರವ್ಯಗಳು ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾವು ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡಿದ್ದೆವು. ಕಾಲೇಜು ಮತ್ತು ಹಾಸ್ಟೆಲ್ ಆವರಣದಲ್ಲಿ ಡ್ರಗ್ಸ್ ವ್ಯವಹಾರ ನಡೆದ ಬಗ್ಗೆ ವಿದ್ಯಾರ್ಥಿಗಳನ್ನು ಗುರುತಿಸಿ ಪಟ್ಟಿ ನೀಡಿದ್ದೆವು. ಇದಕ್ಕೆ ಮಣಿಪಾಲ ವಿವಿ ಸಕಾರಾತ್ಮಕವಾಗಿ ಸ್ಪಂದಿಸಿ ಕ್ರಮ ಕೈಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share This Article
Leave a comment