ಡ್ರಗ್ಸ್ ಪ್ರಕರಣ – ನಟಿ ಸಂಜನಾ, ರಾಗಿಣಿಗೆ ಮತ್ತೆ ಸಂಕಷ್ಟ- ಕೂದಲು ಪರೀಕ್ಷೆಯಲ್ಲಿ ಪಾಸಿಟಿವ್ !

Team Newsnap
1 Min Read

ಡ್ರಗ್ಸ್ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರ ಬಂದಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಮತ್ತೆ ಸಂಕಷ್ಟ ಎದುರಾಗಿದೆ.

ragini and sanjjanaa

ಹೈದ್ರಾಬಾದ್ ನ ಎಫ್‍ಎಸ್‍ಎಲ್ ವರದಿಯಲ್ಲಿ ಇಬ್ಬರು ನಟಿಯರು ಡ್ರಗ್ಸ್ ಸೇವನೆ ಮಾಡಿರುವ ಬಗ್ಗೆ ಸಿಸಿಬಿ ವರದಿ‌ ತರಿಸಿಕೊಂಡಿರುವ ಮಾಹಿತಿ ದೊರಕಿದೆ

ಈ ಹಿಂದೆ ಇಬ್ಬರು ನಟಿಯರನ್ನು ಬಂಧಿಸಿದ್ದಾಗ ತಲೆ ಕೂದಲು ಮತ್ತು ರಕ್ತದ ಮಾದರಿ ಸಂಗ್ರಹಿಸಿ ಡ್ರಗ್ಸ್ ಸೇವನೆ ಪತ್ತೆ ಮಾಡಲು ಕಳುಹಿಸಲಾಗಿತ್ತು.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಲೆ ಕೂದಲಿನ ಮಾದರಿ ಸಂಗ್ರಹ ಮಾಡಲಾಗಿತ್ತು. ಒಮ್ಮೆ ಸರಿಯಾದ ಕ್ರಮದಲ್ಲಿ ಮಾದರಿ ಸಂಗ್ರಹ ಆಗದೇ ತಿರಸ್ಕಾರವಾಗಿತ್ತು.

ಬಳಿಕ ಮತ್ತೊಮ್ಮೆ ಮಾದರಿ ಸಂಗ್ರಹ ಮಾಡಿ ಕಳುಹಿಸಲಾಗಿತ್ತು. ಈಗ ವರದಿ ದೃಢ ಎಂದು ಪ್ರಯೋಗಾಲಯದಿಂದ ವರದಿ ನೀಡಿದೆ ಎಂದು ತಿಳಿದು ಬಂದಿದೆ.

Share This Article
Leave a comment