ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಗ್‌ಬಾಸ್ ಮಾಜಿ ಸ್ಪರ್ಧಿ ಆಡಂ ಪಾಷಾಗೆ ತೀವ್ರ ಅನಾರೋಗ್ಯ ಉಂಟಾಗಿರುವ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲವು ದಿನಗಳಿಂದ ಆಡಂ ಪಾಷಾಗೆ ಜಾಂಡಿಸ್ ಆಗಿತ್ತು. ಆರಂಭದಲ್ಲಿ ಜೈಲಿನಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ ಅವರಿಗೆ ಅನಾರೋಗ್ಯ ಹೆಚ್ಚಾದ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 20 ರಂದು ಆಡಂ ಪಾಷಾ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆಡಂ ಪಾಷಾಗೆ ಡ್ರಗ್ಸ್ ಪ್ರಕರಣದ ರೂವಾರಿ ಅನಿಕಾ ಜೊತೆಗೆ ಸಂಬಂಧವಿತ್ತು ಎನ್ನಲಾಗಿದೆ.
ಅನಿಕಾ ತಮಗೆ ಆತ್ಮೀಯರು ಎಂದು ಈ ಹಿಂದೆ ಒಮ್ಮೆ ಆಡಂ ಪಾಷಾ ಹೇಳಿಕೊಂಡಿದ್ದರು. ‘ಅನಿಕಾ ನನ್ನ ಗೆಳತಿ, ಆದರೆ ಆಕೆಯ ವ್ಯವಹಾರದ ಬಗ್ಗೆ ನನಗೆ ಗೊತ್ತಿರಲಿಲ್ಲ’ ಎಂದಿದ್ದರು ಆಡಂ ಪಾಷಾ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು