ಬೆಂಗಳೂರು (Bangalore) ವಿಮಾನ ನಿಲ್ದಾಣದಲ್ಲಿ 9 ಕೋಟಿ ರು ಮೌಲ್ಯದ ಡ್ರಗ್ (Drug) ಸೀಜ್ ಮಾಡಿದ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ
ರಾಜಧಾನಿಗೆ ವಿದೇಶಗಳಿಂದ ಮಾದಕವಸ್ತುಗಳ ಅಕ್ರಮ ಸಾಗಾಟ ಹೆಚ್ಚಾದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 9 ಕೋಟಿ ರು ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
1002 ಕೆ.ಜಿ. ತೂಕದ 7 ಕೋಟಿ ರೂಪಾಯಿ ಬೆಲೆಬಾಳುವ ಹೆರಾಯಿನ್ ಮತ್ತು 4.58 ಕೆಜಿ ತೂಕದ 2.82 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ (Dubai) ಬೆಂಗಳೂರಿಗೆ ಸಾಗಿಸುತ್ತಿದ್ದ ವೇಳೆ ಸೀಜ್ ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿರುವ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ