ತುಮಕೂರು: ನಗರದಲ್ಲಿ ಡ್ರಗ್ಸ್ ವ್ಯಾಪಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಎರಡು ವಯಕ್ತಿಕರನ್ನು ಬಂಧಿಸಿದ್ದಾರೆ.
ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ, ₹5.50 ಲಕ್ಷ ಮೌಲ್ಯದ 55 ಗ್ರಾಂ ಎಂಡಿಎಂಎ (ಮಾದಕ ವಸ್ತು) ಜಪ್ತಿ ಮಾಡಲಾಗಿದೆ. ಬಂಧಿತರನ್ನು ಹಿಫಾಝ್ ಸಾದಿಕ್ ಮತ್ತು ಸೈಯದ್ ಫರೀದ್ ಎಂದು ಗುರುತಿಸಲಾಗಿದೆ, ಇಬ್ಬರೂ ಗುಬ್ಬಿ ಗೇಟ್ ಮತ್ತು ಪಿ.ಎಚ್. ಕಾಲೊನಿಯ ನಿವಾಸಿಗಳಾಗಿದ್ದು, ತಪಾಸಣೆ ಪ್ರಕಾರ ತಾವು ಡ್ರಗ್ಸ್ ಸಾಗಿಸಲು ರೈಲು ಪ್ರಯಾಣವನ್ನು ಆಯ್ಕೆ ಮಾಡಿಕೊಂಡಿದ್ದರು.
ಈ ಆರೋಪಿಗಳು ಬೆಂಗಳೂರಿನಿಂದ ತುಮಕೂರು ನಗರಕ್ಕೆ ಎಂಡಿಎಂಎ ತಂದು ಮಾರಾಟ ಮಾಡುತ್ತಿದ್ದರು. ಸೈಬರ್ ಠಾಣೆ ಪೊಲೀಸರು ಖಚಿತ ಮಾಹಿತಿಯಂತೆ ದಾಳಿ ನಡೆಸಿ ಈ ಜಾಲವನ್ನು ಬಯಲಿಗೆಳೆದಿದ್ದಾರೆ. ಇತ್ತೀಚೆಗೆ ಮೆಡಿಕಲ್ ಸ್ಟೋರ್‌ನಲ್ಲಿ ವಿದ್ಯಾರ್ಥಿಗಳಿಗೆ ಅಮಲು ಮಾತ್ರೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನೂ ಬಂಧಿಸಲಾಗಿತ್ತು.ಇದನ್ನು ಓದಿ –ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
ಜಿಲ್ಲೆಯಾದ್ಯಂತ ಡ್ರಗ್ಸ್ ಬಳಕೆಯ ಪ್ರಮಾಣ ಹೆಚ್ಚುತ್ತಿರುವುದರಿಂದ, ಯುವಜನತೆಯನ್ನು ಈ ವ್ಯಸನದಿಂದ ದೂರವಿರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರಾದ ಬಾಲಚಂದ್ರಪ್ಪ ಆಗ್ರಹಿಸಿದ್ದಾರೆ.
More Stories
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ