December 22, 2024

Newsnap Kannada

The World at your finger tips!

rain , news , Madikeri

due to rain holiday declared for schools and colleges in kodagu ಕೊಡಗಿನಲ್ಲಿ ಮಳೆ ಅಬ್ಬರ : ಮಂಗಳವಾರವೂ ಶಾಲಾ - ಕಾಲೇಜುಗಳಿಗೆ ರಜೆ #kodagu

ಕೊಡಗಿನಲ್ಲಿ ಮಳೆ ಅಬ್ಬರ : ಮಂಗಳವಾರವೂ ಶಾಲಾ – ಕಾಲೇಜುಗಳಿಗೆ ರಜೆ

Spread the love

ಮಡಿಕೇರಿ : ಕೊಡಗಿನಾದ್ಯಂತ ಭಾರೀ ಗಾಳಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ.

ಪರೀಕ್ಷೆ ಹಿನ್ನೆಲೆಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಜಿಲ್ಲೆಯ ಅಂಗನವಾಡಿ, ಶಾಲೆ, ಹಾಗೂ ಪಿಯು ಕಾಲೇಜಿಗೆ ಮಂಗಳವಾರವೂ ರಜೆ ಘೋಷಿಸಿ ಕೊಡಗು ಡಿಸಿ ವೆಂಕಟ್ ರಾಜ್ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಭಾರೀ ಅವಾಂತರಗಳು ಸೃಷ್ಟಿಯಾಗಿದೆ. ಕೊಡಗಿನ ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಾವೇರಿ ಹಾಗೂ ಉಪನದಿಗಳು ಮೈದುಂಬಿ ಹರಿಯುತ್ತಿವೆ.

ಭಾಗಮಂಡಲದ ತ್ರಿವೇಣಿ ಸಂಗಮದ ನೀರು ಭಂಗಢೇಶ್ವರ ದೇವಾಲಯ ಆವರಣದವರೆಗೂ ಹರಿದಿದೆ
ಭಾಗಮಂಡಲ-ನಾಪೋಕ್ಲು ರಸ್ತೆ ಜಲಾವೃತವಾಗಿದ್ದು, 4 ಅಡಿಯಷ್ಟು ನೀರು ತುಂಬಿಕೊಂಡಿದೆ.

ಭಾರೀ ಗಾತ್ರದ ವಾಹನಗಳಷ್ಟೇ ಪ್ರದೇಶಗಳಲ್ಲಿ ಸಂಚಾರಕ್ಕೆ ಸಾಧ್ಯವಾಗುತ್ತಿದ್ದು, ಸಣ್ಣ ಪುಟ್ಟ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮುಜಾಗ್ರತಾ ಕ್ರಮವಾಗಿ ಒಂದು ತಿಂಗಳಿಂದ ಭಾಗಮಂಡಲದಲ್ಲಿ ಗೃಹ ರಕ್ಷಕ ದಳ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.ಚಾಮುಂಡಿ ತಾಯಿ ದರ್ಶನ ಪಡೆದ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್

ಕಳೆದ ರಾತ್ರಿಯಿಂದ ಮಳೆ ಸ್ವಲ್ಪಮಟ್ಟಿಗೆ ತಗ್ಗಿದೆ ಹಾರಂಗಿ ಜಲಾಶಯಕ್ಕೆ ಒಳಹರಿವು ಇಳಿಕೆಯಾಗಿದೆ. ಜಲಾಶಯಕ್ಕೆ ಒಳಹರಿವು 16,120 ಕ್ಯೂಸೆಕ್ ನೀರು ಇದೆ ಕಾವೇರಿ ನದಿಗೆ 18,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಕಳೆದ ರಾತ್ರಿ ಡ್ಯಾಂ ಅಧಿಕಾರಿಗಳು 36,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದಾರೆ. ಸದ್ಯದ ಮಟ್ಟಿಗೆ ಮಳೆ ಆರ್ಭಟ ಕಡಿಮೆಯಾಗಿದೆ.

WhatsApp Image 2023 07 21 at 9.21.34 PM
Copyright © All rights reserved Newsnap | Newsever by AF themes.
error: Content is protected !!