ನೂತನ ಸಚಿವರಿಗೆ ಖಾತೆ ಹಂಚಿಕೆ ಪಟ್ಟಿ ನಕಲಿ : ಶೀಘ್ರದಲ್ಲೇ ಅಧೀಕೃತ ಪಟ್ಟಿ- ಕೆಪಿಸಿಸಿ

Team Newsnap
1 Min Read
Duplicate Portfolio Allocation List for New Ministers : Official List Soon - KPCC ನೂತನ ಸಚಿವರಿಗೆ ಖಾತೆ ಹಂಚಿಕೆ ಪಟ್ಟಿ ನಕಲಿ : ಶೀಘ್ರದಲ್ಲೇ ಅಧೀಕೃತ ಪಟ್ಟಿ- ಕೆಪಿಸಿಸಿ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟ ವಿಸ್ತರಣೆ ನಂತರ ನೂತನ ಸಚಿವರಿಗೂ ಖಾತೆ ಹಂಚಿಕೆ ಮಾಡಿರುವ ಪಟ್ಟಿ ನಕಲಿಯದ್ದು.

ಶೀಘ್ರದಲ್ಲಿಯೇ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿಳಿಸಿದೆ.

ನಕಲಿ ಸಚಿವ ಸ್ಥಾನ ಹಂಚಿಕೆ ಕುರಿತು ಪಟ್ಟಿ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ, ” ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ ಎಂದು ಪಕ್ಷ ಹೇಳಿದೆ.ನೂತನ ಸಂಸತ್ ಭವನ ಉದ್ಘಾಟನೆ : ಶೃಂಗೇರಿಯ ಪುರೋಹಿತರಿಂದ ಧಾರ್ಮಿಕ ವಿಧಿವಿಧಾನ

ಯಾರೂ ಸಹ ಊಹಾಪೋಹಗಳಿಗೆ ಮಾನ್ಯಮಾಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಪಕ್ಷ ತಿಳಿಸಿದೆ.

Share This Article
Leave a comment