ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ್ ಬಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ದಿಢೀರನೆ ಭೇಟಿ ನೀಡಿದ್ದಾಗ ಸಾಮೂಹಿಕ ನಕಲು ನಡೆಯುತ್ತಿರುವುದನ್ನು ಕಲಬುರಗಿ ಎಸ್‌ಪಿ ಇಶಾ ಪಂತ್ ಕಣ್ಣಾರೆ ಕಂಡಿದ್ದರು.
ಏಪ್ರಿಲ್ 3 ರಂದು ನಡೆದ ಪರೀಕ್ಷೆಯಲ್ಲಿ ಗೊಬ್ಬುರ್ ಬಿ ಗ್ರಾಮ, ಅತನೂರ್ ಗ್ರಾಮ ಸೇರಿದಂತೆ ವಿವಿಧೆಡೆ ಸಾಮೂಹಿಕ ನಕಲು ನಡೆದಿದೆ. ನಕಲು ಮಾಡಲು ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯ ಹಾಗೂ ಸಿಬ್ಬಂದಿ ಅವಕಾಶ ಮಾಡಿಕೊಟ್ಟಿದ್ದರು ಎಂದು ಆರೋಪಿಸಲಾಗಿದೆ.
ಮೈಕ್ರೋ ಜೆರಾಕ್ಸ್ ಮಾಡಿಕೊಂಡು ಪುಸ್ತಕ ಹಿಡಿದು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರು. ಈ ಕಾರಣಕ್ಕೆ ಮುಖ್ಯೋಪಾಧ್ಯಾಯ ಸೇರಿದಂತೆ 15 ಜನ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.ಇದನ್ನು ಓದಿ –42 ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ : ಮಂಡ್ಯ ರವಿ ಗಣಿಗ, ಮೇಲುಕೋಟೆ ಯಲ್ಲಿ ದರ್ಶನ್ ಗೆ ಬೆಂಬಲ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು