November 6, 2024

Newsnap Kannada

The World at your finger tips!

WhatsApp Image 2023 07 07 at 4.25.48 PM

duty is oil more expensive? How much increase? Increase in loan limit for farmers ಎಣ್ಣೆ ಮತ್ತಷ್ಟು ದುಬಾರಿ ಎಷ್ಟು ಸುಂಕ ? ಎಷ್ಟು ಏರಿಕೆ ? ರೈತರಿಗೆ

ಎಣ್ಣೆ ಮತ್ತಷ್ಟು ದುಬಾರಿ ಎಷ್ಟು ಸುಂಕ ? ಎಷ್ಟು ಏರಿಕೆ ? ರೈತರಿಗೆ ಸಾಲದ ಮಿತಿ ಏರಿಕೆ

Spread the love

ಬೆಂಗಳೂರು: ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು ಭಾರೀ ಏರಿಸಿದೆ.

ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ತಮ್ಮ ಬಜೆಟ್‌ ಭಾಷಣದಲ್ಲಿ ಬಿಯರ್‌ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.

2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.

ರೈತರಿಗೆ ಶೂನ್ಯ ಬಡ್ಡಿ ದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ :

ಬಜೆಟ್ ನಲ್ಲಿ ರೈತರಿಗೆ ಸಿಎಂ ಸಿದ್ದರಾಮಯ್ಯ ಶೂನ್ಯ ಬಡ್ಡಿ ದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಿದ್ದಾರೆ.

ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದ್ದು, ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದೆ, ಗುಡ್ಡಗಾಡು ಪ್ರದೇಶದ ರೈತರಿಗೆ ಪಿಕಪ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಜೆಟ್ ನಲ್ಲಿ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದು, 45 ಸಾವಿರ ಕೋಟಿ ಅನುದಾನ ಘೋಷಿಸಿದ್ದಾರೆ.ಬೆಂಗಳೂರು ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದ್ದು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ಬಜೆಟ್ ನಲ್ಲಿ ನಿರ್ಧಾರ ಮಾಡಲಾಗಿದೆ. 19 ಕೆರೆ ತುಂಬಿಸು ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ.

ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈಗಾಗಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇದೀಗ 14 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ.ರಾಜ್ಯದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗಿರುವುದರಿಂದ ವಾರ್ಷಿಕವಾಗಿ 52 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಅನುಗ್ರಹ ಯೋಜನೆ ಮರು ಜಾರಿ ಮಾಡಲಾಗುವುದು, ರೈತರಿಗೆ 3 ರಿಂದ 5 ಲಕ್ಷ ರೂ.ವರೆಗೆ ಅಲ್ಪಾವಧಿ ಸಾಲ ನೀಡಲಾಗುವುದು. ಮೈಸೂರು-ಕಲಬುರಗಿಯಲ್ಲಿ ಟ್ರಾಮಾ ಸೆಂಟರ್ ಗೆ ಅನುದಾನ, ನಮ್ಮ ಮೆಟ್ರೋಗೆ 30,000 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಅನುದಾನ ನೀಡಲಾಗುವುದು.ರಾಜ್ಯ ಬಜೆಟ್ ಮಂಡಿಸಿದ ಸಿ ಎಂ ಸಿದ್ದು : ಆದಾಯಕ್ಕಿಂತ ಖರ್ಚು ಹೆಚ್ಚು

ಬ್ರ್ಯಾಂಡ್ ಬೆಂಗಳೂರಿಗೆ ಬಂಪರ್ ಗಿಫ್ಟ್ ನೀಡಲಾಗಿದ್ದು, ನಮ್ಮ ಮೆಟ್ರೋಗೆ 30,000 ಕೋಟಿ ರೂ. ಅನುದಾನ ನೀಡಲಾಗಿದೆ. 45 ಸಾವಿರ ಕೋಟಿ ಅನುದಾನ ನೀಡಲಾಗಿದೆ. ವೈಟ್ ಟಾಪಿಂಗ್, ರಸ್ತೆಅಭಿವೃದ್ಧಿ, ತ್ಯಾಜ ವಿಲೇವಾರಿ, ಮೆಟ್ರೋ ಉಪನಗರ ರೈಲಿಗೆ 30 ಸಾವಿರ ಕೋಟಿ ರೂ. ನಿಯೋಜನೆ ಮಾಡಲಾಗಿದೆ ಎಂದರು.

Copyright © All rights reserved Newsnap | Newsever by AF themes.
error: Content is protected !!