ಹಾಸನದಲ್ಲಿ ಲಘು ಭೂಕಂಪನ : ಮನೆಯಿಂದ ಹೊರಗೆ ಓಡಿಬಂದ ಜನ

Team Newsnap
1 Min Read

ಹಾಸನ ಜಿಲ್ಲೆಯ ಹಲವೆಡೆ ಗುರುವಾರ ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಅರಕಲಗೂಡು ತಾಲೂಕಿನ ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ.

ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮದ ಸುತ್ತಮುತ್ತಲೂ ಬೆಳಗ್ಗೆ 4.52 ನಿಮಿಷದಲ್ಲಿ ಭೂಮಿ ನಡುಗಿದ ಅನುಭವ ಆಗಿದೆ. ಭೂಕಂಪಕ್ಕೆ ನಿದ್ದೆಯಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಮನೆಗಳಲ್ಲಿ ಬಿರುಕು ಬಿಟ್ಟಿದೆ.

ಗುರುವಾರ ಬೆಳಗಿನ ಜಾವ 4.38 ರ ಆಸು ಪಾಸು ಭೂಮಿ ಕಂಪಿಸಿದೆ. ಕಂಪಿಸಿದ ಅನುಭವ ಆಗುತ್ತಿದ್ದಂತೆ ಹಾಸಿಗೆಯಿಂದ ಎದ್ದು ಓಡಿ ಬಂದಿರುವ ಬಗ್ಗೆ ಗ್ರಾಮಸ್ಥರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧಿಕಾರಿಗಳು ಲಘು ಭೂಕಂಪನವನ್ನು ದೃಢಪಡಿಸಿದ್ದಾರೆ.

ಈ ನಡುವೆ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪನದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 1800 ಕ್ಕೂ ಅಧಿಕ ಸಂಖ್ಯೆಯ ಜನ ಸಾವನ್ನಪ್ಪಿದ ಬೆನ್ನಲ್ಲೇ ಹಾಸನದಲ್ಲಿ ಭೂಮಿ ಕಂಪಿಸಿದ್ದು ಜನರಿಗೆ ಆತಂಕ ಮೂಡಿಸಿದೆ.

Share This Article
Leave a comment