ಕೊಡಗಿನಲ್ಲಿ ಮಧ್ಯರಾತ್ರಿ ಮತ್ತೆ ಭೂಕಂಪನ- ಜನರಿಗೆ ಆತಂಕ

Team Newsnap
1 Min Read

ಕೊಡಗಿನಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಿದೆ. ಕೊಡಗಿನ ಗಡಿಯಲ್ಲಿ ಗುರುವಾರ ಮಧ್ಯರಾತ್ರಿ ಮತ್ತೆ 2 ಬಾರಿ ಭೂಮಿ ಕಂಪಿಸಿದೆ.

ಕಳೆದ ರಾತ್ರಿ 1 ಗಂಟೆಯಿಂದ 1.40 ಗಂಟೆ ಅವಧಿಯಲ್ಲಿ ಸಂಪಾಜೆ, ಪೆರಾಜೆ, ಗೂನಡ್ಕ, ಕರಿಕೆ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಕಂಪನವಾಗಿದೆ.

WhatsApp Image 2022 07 01 at 10.16.46 AM

ಗ್ರಾಮದಲ್ಲಿ ದೊಡ್ಡ ಶಬ್ದ ಎರಡು ಬಾರಿಯೂ ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.

ಗುರುವಾರ ಸಂಪಾಜೆಯಲ್ಲಿ ರಿಕ್ಟರ್ ಮಾಪನ ಅಳವಡಿಸಲಾಗಿದ್ದು ಭೂಕಂಪನದ ಪ್ರಮಾಣ ಸ್ಪಷ್ಟವಾಗಿ ಇನ್ನಷ್ಟೇ ತಿಳಿಯಬೇಕಾಗಿದೆ. ಇದನ್ನು ಓದಿ – ಚಾಮುಂಡಿ ಬೆಟ್ಟದಲ್ಲಿ ಹಬ್ಬದ ಸಂಭ್ರಮ – ತಾಯಿ ದರ್ಶನಕ್ಕೆ ಬರುತ್ತಿರುವ ಭಕ್ತ ಸಾಗರ

ಮಂಗಳೂರಿನಲ್ಲಿ ವರುಣನ ಆರ್ಭಟ – ಅಸ್ತವ್ಯಸ್ತ

ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗ್ತಿದೆ. ವರುಣಾರ್ಭಕ್ಕೆ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿ ಹೋಗಿದೆ. ಮಂಗಳೂರು ನಗರ ಭಾಗದಲ್ಲೇ ಅತಿ ಹೆಚ್ಚು ಮಳೆಯಾಗಿದೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದವು.

WhatsApp Image 2022 07 01 at 10.16.33 AM

ನಗರದ ಹೆದ್ದಾರಿಗಳಲ್ಲೂ ನೀರು ಹರಿದು ಹೋಗಲು ಸಾಧ್ಯವಾಗದೇ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡು ಜನರು ಪರದಾಡುವಂತಾಗಿತ್ತು.

Share This Article
Leave a comment