ಕೆರೆಬಿಯನ್ ರಾಷ್ಟ್ರ ಹೈಟಿಯಲ್ಲಿ ಭಾರಿ ಭೂಕಂಪ – 304 ಮಂದಿ ಸಾವು

Team Newsnap
1 Min Read
continuously 2 times earthquake in chikkaballapura

ಕೆರೆಬಿಯನ್ ರಾಷ್ಟ್ರ ಹೈಟಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 304ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ರಿಕ್ಟರ್ ಮಾಪಕದಲ್ಲಿ 7.2ರಷ್ಟು ತೀವ್ರತೆ ದಾಖಲಾಗಿದೆ.‌ ಭಾರಿ ಪ್ರಮಾಣದ ಭೂಕಂಪದಿಂದಾಗಿ ನೂರಾರು ಕಟ್ಟಡಗಳು ಸಂಪೂರ್ಣ ನೆಲಸಮವಾಗಿವೆ.

ಹೈಟಿ ರಾಜಧಾನಿ ಪೋರ್ಟ್- ಔ-ಪ್ರಿನ್ಸ್ ನಿಂದ 160 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪವಾಗ್ತಿದ್ದಂತೆಯೇ ಎಲ್ಲರೂ ತಮ್ಮ ತಮ್ಮ ಮನೆಗಳನ್ನು ಬಿಟ್ಟು ಹೊರಗೆ ಓಡೋಡಿ ಬಂದಿದ್ದಾರೆ. ಆದರೆ ಮನೆಯಲ್ಲೇ ಇದ್ದವರು ಅವಶೇಷಗಳಡಿ ಸಿಲುಕಿ ಸಾವು- ಬದುಕಿನ ನಡುವೆ ಹೋರಾಟ ಮಾಡ್ತಿದ್ದಾರೆ.

ನೂರಾರು ಮಂದಿ ಭೂಕಂಪಕ್ಕೆ ಸಿಲುಕಿ ಕಣ್ಮರೆಯಾಗಿದ್ದಾರೆ. ಸದ್ಯ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಭೂಕಂಪದಿಂದ ಹೈಟಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಲೇ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Share This Article
Leave a comment