ಆಲೆಮನೆಯಲ್ಲಿ ಬೆಲ್ಲ ಉತ್ಪನ್ನಗಳು ಯಾವ ರೀತಿಯಾಗುತ್ತದೆ. ಇದಕ್ಕೆ ಯಾವ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಹೊಸ ತಂತ್ರಜ್ಞಾನಗಳನ್ನು ಅಳವಡಿಸಬಹುದೇ? ಇದಕ್ಕೆ ಎಷ್ಟು ಸಾಲ ತಗುಲುತ್ತದೆ ಎಂಬಿತ್ಯಾದಿ ವಿಷಯಗಳನ್ನು ತಿಳಿದುಕೊಳ್ಳಲು ಮಂಡ್ಯ ದ ಆಲೆಮನೆ ಭೇಟಿ ನೀಡಿದ ವೇಳೆ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಸಾವಯವ ಬೆಲ್ಲಕ್ಕೆ ಆತ್ಮನಿರ್ಭರ ಯೋಜನೆಯಡಿ ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.
ಜೊತೆಗೆ ಗುಣಮಟ್ಟದ ಬೆಲ್ಲ ತಯಾರಿಗೆ ಎಷ್ಟು ಅನುದಾನ ಕೊಡಬಹುದು? ಎಂಬ ನಿಟ್ಟಿನಲ್ಲಿಯೂ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.
ಸಹಕಾರ ಇಲಾಖೆಯಿಂದ ನಾಲ್ಕು ವಿಭಾಗಕ್ಕೆ ಆರ್ಥಿಕ ಸ್ಪಂದನೆ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದ್ದೇವೆ. ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಚಾಲನೆ ಕೊಟ್ಟಿದ್ದಾರೆ. ಅಕ್ಟೋಬರ್ 2 ರಂದು ಮೈಸೂರು ವಿಭಾಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಅಂದು ಈ ಭಾಗದ ರೈತರು, ಸಣ್ಣ ಉದ್ದಿಮೆಗಳು ಸೇರಿದಂತೆ ಯಾವೆಲ್ಲ ಕ್ಷೇತ್ರಗಳಿಗೆ ಯಾವ ರೀತಿಯ, ಯಾವ ಯೋಜನೆಯಡಿ ಸಾಲಗಳನ್ನು, ಯಾವ ಪ್ರಮಾಣದಲ್ಲಿ ಕೊಡಬಹುದು ಎಂದು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಸಚಿವರಿಂದ ಆಲೆಮನೆ ವೀಕ್ಷಣೆ
ಮಂಡ್ಯದ ಆಲೆಮನೆಗೆ ಭೇಟಿ ನೀಡಿದ ಸಚಿವರಾದ ಸೋಮಶೇಖರ್ ಅವರು, ಬೆಲ್ಲದ ಉತ್ಪನ್ನಗಳ ತಯಾರಿಕಾ ಹಂತಗಳನ್ನು ಖುದ್ದು ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡರು.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು