ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸೋನಿಯಾ, ರಾಹುಲ್‌ ಗಾಂಧಿಗೆ ಇಡಿ ನೋಟಿಸ್‌

Team Newsnap
1 Min Read

ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ಕಳುಹಿಸಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಪ್ರಕಾರ, ಜೂನ್ 8 ರಂದು ಹಾಜರಾಗುವಂತೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ತಿಳಿಸಿದೆ. ಸೋನಿಯಾ ಗಾಂಧಿ ಅವರು ಇಡಿಗೆ ಹೋಗುತ್ತಾರೆ, ರಾಹುಲ್‌ ಗಾಂಧಿ ಈಗ ವಿದೇಶದಲ್ಲಿದ್ದಾರೆ. ಅವರು ಹಿಂದಿರುಗಿದ ಬಳಿಕ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುತ್ತಾರೆ ಹೇಳಿದರು.

ಇದನ್ನು ಓದಿ –ರಾಜ್ಯಾದ್ಯಂತ ಏಕಕಾಲಕ್ಕೆ 50 ಕಡೆಗಳಲ್ಲಿ IT ದಾಳಿ: ಬೆಂಗಳೂರಿನ ಉದ್ಯಮಿಗಳಿಗೆ ಶಾಕ್

ನ್ಯಾಷನಲ್ ಹೆರಾಲ್ಡ್ ಅನ್ನು ಪ್ರತಿ ಬಾರಿ ಗುರಿಯಾಗಿಸುವ ಮೂಲಕ ಬಿಜೆಪಿಯು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದೆ ಮತ್ತು ಅಗೌರವಿಸಿದೆ. ಏಕೆಂದರೆ ಬಿಜೆಪಿಯ ಹಿಂದಿನವರು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಪಾತ್ರವನ್ನು ವಹಿಸಲಿಲ್ಲ ಇಂದು ಮೋದಿ ಸರ್ಕಾರವು ಇಡಿಯನ್ನು ಬಳಸುತ್ತಿದೆ ಎಂದು ರಣದೀಪ್ ಸುರ್ಜೇವಾಲಾ ಹೇಳಿದರು.

Share This Article
Leave a comment