ಮುಂಬೈ ನಲ್ಲಿ ಶಿವಸೇನಾ ಸಂಸದ ರಾವತ್ ನಿವಾಸದ ಮೇಲೆ ED ದಾಳಿ

Team Newsnap
1 Min Read
ED officials arrested Shiv Sena MP Sanjay Rawat

ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಭಾನುವಾರ ಬೆಳಗ್ಗೆ ದಾಳಿ ಮಾಡಿದ್ದಾರೆ.

1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿದ್ದರು.ಇದನ್ನು ಓದಿ -ಪಿಎಸ್ಐ ಪರೀಕ್ಷೆ ಹಗರಣ- 3 ತಿಂಗಳಿಂದ ಎಸ್ಕೇಪ್ಆಗಿದ್ದ ಮತ್ತೊಬ್ಬ PSI ಬಂಧನ: ಮಂಬೈನಲ್ಲಿ ಸಿಐಡಿ ಬಲೆಗೆ

ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಅಧಿವೇಶನವನ್ನು ಉಲ್ಲೇಖಿಸಿ ಹಿಂದಿನ ಸಮನ್ಸ್ ತಪ್ಪಿಸಿದ ನಂತರ ಸಂಜಯ್ ರಾವತ್ ಅವರನ್ನು ಜುಲೈ 27 ರಂದು ತನಿಖಾ ಸಂಸ್ಥೆಯು ಕರೆಸಿತ್ತು.

ಇಂದು ಬೆಳಗ್ಗೆ ಮುಂಬೈನ ಬಂಡಪ್‍ನಲ್ಲಿರುವ ರಾವತ್ ಅವರ ಮನೆಗೆ ತನಿಖಾ ಸಂಸ್ಥೆ ತಂಡವು ಸಿಆರ್‌ಪಿಎಫ್ ಅಧಿಕಾರಿಗಳ ಜೊತೆ ದಾಳಿ ಮಾಡಿದೆ. ಸದ್ಯ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಈ ಸಮನ್ಸ್ ನಿರಾಕರಿಸಿ ಇದು ರಾಜಕೀಯ ದ್ವೇಷದ ಕಾರಣದಿಂದ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ರಾವತ್ ಆರೋಪಿಸಿದ್ದಾರೆ.

ಈ ನಡುವೆ ಜುಲೈ 1 ರಂದು ರಾವತ್ ಅವರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‍ಎ) ಕ್ರಿಮಿನಲ್ ಸೆಕ್ಷನ್‍ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಏಪ್ರಿಲ್‍ನಲ್ಲಿ, ಜಾರಿ ನಿರ್ದೇಶನಾಲಯವು ತನ್ನ ತನಿಖೆಯ ಭಾಗವಾಗಿ ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಮಾಡಿದ್ದಾರೆ.

Share This Article
Leave a comment