ಜಾರ್ಖಂಡ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಮನೆ, ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ, ಅಧಿಕಾರಿಯ ಚಾರ್ಟೆಡ್ ಅಕೌಂಟೆಂಟ್ (CA) ಮನೆಯಲ್ಲಿ 18 ಕೋಟಿ ರೂಪಾಯಿ ನಗದು ಪತ್ತೆ ಹಚ್ಚಿದ್ದಾರೆ.
ಈಪ್ರಕರಣದಲ್ಲಿ ಐಎಎಸ್ ಅಧಿಕಾರಿ ಪತಿ ಅಭಿಷೇಕ್ ಝೂರನ್ನು ಪೊಲೀಸರು ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೇ ಅಭಿಷೇಕ್ ಝೂ ಹಣಕಾಸಿನ ವ್ಯವಹಾರ ನೋಡಿಕೊಳ್ಳುವ ಸಿಎ ಸುಮನ್ ಕುಮಾರ್ ಅನ್ನು ಕೂಡ ಅಧಿಕಾರಿಗಳು ಬಂಧನ ಮಾಡಿದ್ದಾರೆ.
ಮಹಾತ್ಮಗಾಂಧಿ ನರೇಗಾ ಯೋಜನೆಯ ಹಣವನ್ನು ಬೇರೆಡೆ ವರ್ಗಾವಣೆ ಮಾಡಿದ ಆರೋಪ ಐಎಎಸ್ ಈ ಅಧಿಕಾರಿ ಮೇಲಿದೆ.
ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಇ.ಡಿ ಅಧಿಕಾರಿಗಳು ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಪಂಜಾಬ್ ಸೇರಿದಂತೆ ನಾಲ್ಕು ರಾಜ್ಯಗಳ 18 ವಿವಿಧ ಸ್ಥಳಗಳಲ್ಲಿ ದಾಳಿಗಳನ್ನು ಮಾಡಿದ್ದರು.
ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಅವರ ಆಪ್ತವಲಯದ ಅಧಿಕಾರಿಯಾಗಿದ್ದರು ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ