ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿ ಒಂದೇ ಕಡೆ ಇರುವ ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಬೂಕನಕೆರೆ ಸ್ಮರಿಸಿದ ಬಿ. ಎಸ್ .ವೈ- ಬಿಜೆಪಿ ಅಧಿಕಾರಕ್ಕೆ ತರುವೆ
ಪ್ರಶ್ನೆ ಪತ್ರಿಕೆ ಸೋರಿಕೆ, ಆಕ್ರಮ ನೇಮಕಾತಿ ಮೊದಲಾದ ಹಗರಣಗಳಲ್ಲಿ ಸಿಬ್ಬಂದಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಕಡೆ ಇರುವ ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲಾಗುವುದು.
5 ವರ್ಷಕ್ಕಿಂತ ಹೆಚ್ಚು ಸಮಯದಿಂದ ಇರುವ ಸಿಬ್ಬಂದಿಯ ಮಾಹಿತಿ ನೀಡಲು ಶಿಕ್ಷಣ ಇಲಾಖೆ ಎಲ್ಲಾ ಅಧೀನ ಕಚೇರಿಗಳಿಗೆ ನಿರ್ದೇಶನ ನೀಡಿದೆ.
ಐದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಕಡೆ ಇರುವ ಶಿಕ್ಷಣ ಇಲಾಖೆಯ ಅಧೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಶೀಘ್ರ ಲಿಪಿಕಾರರು, ಬೆರಳಚ್ಚುಗಾರರು, ಗ್ರೂಪ್ ಡಿ ನೌಕರರನ್ನು ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು