ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ

Newsnap Team
1 Min Read
Egg distribution to school children ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ


ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳ 1ರಿಂದ 8ನೇ ತರಗತಿ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಒಂದು ದಿನ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸಲು ಬುಧವಾರ ಸರ್ಕಾರ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಶುಭ ಕಲ್ಯಾಣ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಸಿಬ್ಬಂದಿಗೆ ಬೇಯಿಸಿದ ಮೊಟ್ಟೆಯನ್ನು ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಪೂರಕವಾಗಿ ನೀಡುವಂತೆ ಸೂಚಿಸಿದ್ದಾರೆ. ಮೊಟ್ಟೆ ತಿನ್ನದಿರುವವರಿಗೆ ಬಾಳೆಹಣ್ಣು ಅಥವಾ ಚಿಕ್ಕಿ (ಕಡಲೆಕಾಯಿ ಮತ್ತು ಬೆಲ್ಲದಿಂದ ಮಾಡಿದ ಖಾದ್ಯ) ನೀಡುವಂತೆ ತಿಳಿಸಿದ್ದಾರೆ.

ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ಹೋಗಲಾಡಿಸಲು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕಗಳನ್ನು ನೀಡಲಾಗುವುದು. ಜುಲೈ 15ರವಗೆ ಮೊದಲ ಹಂತದಲ್ಲಿ ವಾರಕ್ಕೊಮ್ಮೆ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲು ಸರ್ಕಾರ ಮುಂದಾಗಿದೆ. ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ಪ್ರತಿಯೊಂದಕ್ಕೂ 8 ರೂ. ನೀಡಿ ಖರೀದಿಸಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.ಗೃಹಜ್ಯೋತಿಗೆ 8 ಲಕ್ಷ ನೋಂದಣಿ

ಶಾಲೆಗೆ ಹೋಗುವ ಮಕ್ಕಳಲ್ಲಿ ತಾರತಮ್ಯ ಉಂಟುಮಾಡುವ ಕಾರಣ ಶಾಲಾ ಆವರಣದಲ್ಲಿ ಮೊಟ್ಟೆಗಳನ್ನು ವಿತರಿಸಬಾರದು ಎಂದು ಹಿಂದೆ ಕೆಲವರು ಒತ್ತಾಯಿಸಿದರು. ಮತ್ತೊಂದು ಸಮುದಾಯ ಈ ಯೋಜನೆಯನ್ನು ನಿಲ್ಲಿಸಬಾರದು ಎಂದು ಪ್ರತಿಪಾದಿಸಿದೆ. ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಧಾರ್ಮಿಕ ಗುಂಪುಗಳ ಒತ್ತಡಕ್ಕೆ ಮಣಿದು 2007ರಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವ ಯೋಜನೆಯನ್ನು ಎಚ್.ಡಿ. ಕುಮಾರಸ್ವಾಮಿ ಹಿಂದಕ್ಕೆ ಪಡೆದಿದ್ದರು. ಆದರೆ, ಬಿಜೆಪಿ ಸರ್ಕಾರ ಈ ಯೋಜನೆಯನ್ನು ಮತ್ತೇ ಜಾರಿಗೆ ತಂದಿತ್ತು. 

Share This Article
Leave a comment